ಬಂಟ್ವಾಳ : 2023- 24 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಪ್ರಥಮ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವು ನಡೆಯಿತು.
ಕಾಲೇಜು ಅಭಿವೃದ್ಧಿ ಮಂಡಳಿಯ ಗೌರವಾಧ್ಯಕ್ಷ ಹಾಜಿ ಎನ್ ಸುಲೈಮಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಕ್ಕಳಲ್ಲಿ ಶಿಸ್ತು ಮತ್ತು ಕಳೆದ ಸಾಲಿನಲ್ಲಿ ಕಾಲೇಜಿಗೆ ಉತ್ತಮ ಫಲಿತಾಂಶ ತರುವಲ್ಲಿ ಅವಿರತವಾಗಿ ಶ್ರಮಿಸಿದ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ರೀಟಾ ಡಿಸೋಜಾ ಮಾತನಾಡಿ ಮಕ್ಕಳಲ್ಲಿ ಸಮಯ ಪ್ರಜ್ಞೆ, ಶಿಸ್ತು ಮತ್ತು ಶಿಕ್ಷಣದ ಮಹತ್ವದ ಬಗ್ಗೆ ಅರಿವು ಮೂಡಿಸಿ ಎಂದರು.
ನಾರ್ಶ ಮೈದಾನ ಪ್ರೌಢಶಾಲಾ ವಿಭಾಗದ ಪ್ರಭಾರ ಮುಖ್ಯ ಶಿಕ್ಷಕಿ ಲತಾ , ಕಾಲೇಜು ಕನ್ನಡ ವಿಭಾಗದ ಉಪನ್ಯಾಸಕಿ ಮಾಲತಿ, ವಿದ್ಯಾರ್ಥಿ ಸಂಘದ ನಾಯಕ ಕು ಸಂಶುದ್ದೀನ್ ಕ್ರೀಡಾ ನಾಯಕಿ ಅಫ್ರಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾಲೇಜು ಮಟ್ಟದ ಚುನಾವಣೆಯಲ್ಲಿ ವಿಜಯಶಾಲಿಗಳಾದ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ವಿಧಿ ಬೋಧನಾ ಕಾರ್ಯಕ್ರಮವು ನಡೆಯಿತು.
ವಿದ್ಯಾರ್ಥಿ ಸಂಘದ ನಾಯಕ ಸ್ವಾಗತಿಸಿ, ನಿಶಾನ ವಂದಿಸಿ, ವಿದ್ಯಾರ್ಥಿ ಸಂಘದ ಉಪ ನಾಯಕಿ ಅಫ್ರಿನಾ ಕಾರ್ಯಕ್ರಮವನ್ನು ನಿರೂಪಿಸಿದರು.
ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವ್ಯಕ್ತಿತ್ವ ವಿಕಸನದಂತಹ ಚಟುವಟಿಕೆಗಳು ನಡೆದು ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವು ಸಂಪನ್ನಗೊಂಡಿತು.


























