ಮೂಡುಬಿದಿರೆ : ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಸುಮಂತ್ (21) ಆತ್ಮಹತ್ಯೆ ಮಾಡಿಕೊಂಡ ಯುವಕ.

ಸುಮಂತ್ ನಿನ್ನೆ ರಾತ್ರಿ ಮೂಡುಬಿದ್ರೆಯ ಮನೆಯಲ್ಲಿ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸುಮಂತ್ ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜು ಬಳಿಯ ಸುವರ್ಣನಗರ ನಿವಾಸಿ ಸುರೇಶ್ ಎಂಬವರ ಪುತ್ರನಾಗಿದ್ದು, ಕೌಟುಂಬಿಕ ವಿಚಾರಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ.
ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ.

























