ಪುತ್ತೂರು : ನಿವೃತ್ತ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿ ದಯಾನಂದ ಶೆಟ್ಟಿ (75) ರವರು ಅನಾರೋಗ್ಯದಿಂದಾಗಿ ನಿಧನರಾದರು.

ತಿಂಗಳಾಡಿ ಮಠದ ನಿವಾಸಿಯಾಗಿರುವ ದಯಾನಂದ ಶೆಟ್ಟಿ ರವರು ಕೆ.ಎಸ್.ಆರ್.ಟಿ.ಸಿಯಲ್ಲಿ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ನಿವೃತ್ತರಾಗಿದ್ದರು.
ಮೃತರು ಪತ್ನಿ ಚಂದ್ರಾವತಿ, ಮಕ್ಕಳಾದ ಕೆದಂಬಾಡಿ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ, ಹಾಲಿ ಗ್ರಾಮ ಪಂಚಾಯತ್ ಸದಸ್ಯ ಪ್ರವೀಣ್ ಶೆಟ್ಟಿ ತಿಂಗಳಾಡಿ, ಸುಗುಣ, ಸುಧಾ, ಸುಕನ್ಯಾ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
























