ಬೆಂಗಳೂರು : ಡೆಡ್ಲಿ ವೀಲ್ಹಿಂಗ್ ಮಾಡುತ್ತಿದ್ದ ಇಬ್ಬರು ಯುವಕರನ್ನ ರಾಮನಗರ ಪೊಲೀಸ್ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.
ಶೋಯೆಬ್ ಮತ್ತು ಆತನ ಸ್ನೇಹಿತನನ್ನು ಬಂಧಿಸಲಾಗಿದೆ.
ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಯುವಕರಲ್ಲಿ ವೀಲ್ಹಿಂಗ್ ಹುಚ್ಚಾಟ ಹೆಚ್ಚಾಗಿದ್ದು, ಇನ್ನುಳಿದ ವಾಹನ ಸವಾರರು ಭಯದಿಂದ ಓಡಾಡುವಂತಹ ಸ್ಥಿತಿ ಎದುರಾಗಿದೆ. ಹೀಗಾಗಿ ಸಾರ್ವಜನಿಕರು ಯುವಕರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸುತ್ತಿದ್ದಾರೆ. ಹೀಗೆ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ವಿರುದ್ಧ ದಿಕ್ಕಿನಲ್ಲಿ ವೀಲ್ಹಿಂಗ್ ಮಾಡುತ್ತಿದ್ದ ಇಬ್ಬರು ಯುವಕರನ್ನು ರಾಮನಗರ ಪೊಲೀಸ್ ಅಧಿಕಾರಿಗಳು ಬಂಧಿಸಿದ್ದಾರೆ.

























