ಪುತ್ತೂರು : ನಿಡ್ಪಳ್ಳಿ ಗ್ರಾಮ ಪಂಚಾಯತ್ ಉಪಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಸತೀಶ್ ಶೆಟ್ಟಿ, ಹರೀಶ್ ನಾಮಪತ್ರ ಸಲ್ಲಿಸಿದರು.

ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮ ಪಂಚಾಯತಿ ಮತ್ತು ನಿಡ್ಪಳ್ಳಿ ಗ್ರಾಮ ಪಂಚಾಯಿತಿಯಲ್ಲಿ ತೆರವಾಗಿದ್ದ ತಲಾ ಒಂದು ಸ್ಥಾನಗಳಿಗೆ ಜುಲೈ 23 ರಂದು ಉಪಚುನಾವಣೆ ನಡೆಯಲಿದೆ.
ನಿಡ್ಪಳ್ಳಿ ಗ್ರಾಮ ಪಂಚಾಯತಿಯ ಒಂದನೇ ವಾರ್ಡ್ ಸದಸ್ಯ ಮುರಳೀಕೃಷ್ಣ ಭಟ್ ಕೆಲವು ತಿಂಗಳ ಹಿಂದೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು.



























