ವಿಟ್ಲ : ಕಾರು-ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ವಿಟ್ಲ ಬಳಿ ನಡೆದಿದೆ.

ಘಟನೆಯಲ್ಲಿ ಕಡಂಬು ನಿವಾಸಿ ಫೈಝಲ್ ಮತ್ತು ಸಿನಾನ್ ಗಾಯಾಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಅಪಘಾತದ ತೀವ್ರತೆಗೆ ಬೈಕ್, ಕಾರು ಜಖಂಗೊಂಡಿದ್ದು, ಬೈಕ್ ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರು ಚಾಲಕ ಸುಳ್ಯ ಸಮೀಪದ ಕನಕಮಜಲು ನಿವಾಸಿ ಗೋಪಾಲಕೃಷ್ಣ ಅವರು ತನ್ನ ಪುತ್ರಿಯನ್ನು ಮುಡಿಪು ನವೋದಯ ವಸತಿ ಶಾಲೆಗೆ ದಾಖಲಿಸಿ ವಾಪಾಸ್ಸಾಗುತ್ತಿದ್ದರು.

ಸ್ದಳಕ್ಕೆ ವಿಟ್ಲ ಪೊಲೀಸರು ಮತ್ತು ಹೈವೇ ಪೇಟ್ರೋಲ್ ಪೊಲೀಸರ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

























