ಕಾರ್ಕಳ : ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಎಚ್. ಸಿ. ಪ್ರಶಾಂತ್ ಮಿಯ್ಯಾರು (49) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರಶಾಂತ್ ಮಿಯ್ಯಾರು ಗ್ರಾಮದ ಕಾಜರಬೈಲು ನಿವಾಸಿಯಾಗಿದ್ದು, ಅವಿವಾಹಿತರಾಗಿದ್ದರು.
ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಅದೇ ನೋವಿನಲ್ಲಿ ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಅಧಿಕ ರಕ್ತದೊತ್ತಡ ಮತ್ತು ಸಕ್ಕರೆ ಕಾಯಿಲೆಯಿಂದ ಪ್ರಶಾಂತ್ ಬಳಲುತ್ತಿದ್ದರು.
ಇತ್ತೀಚೆಗಷ್ಟೆ ಕಾರ್ಕಳ ನಗರ ಠಾಣೆಯಿಂದ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗವಾಗಿ ಪ್ರಸ್ತುತ ರಜೆಯಲ್ಲಿದ್ದರು.
ಮನೆಯ ಹಿಂದೆ ನೇಣು ಹಾಕಿಕೊಂಡಿರುವುದು ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.

























