ಪುತ್ತೂರು : ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿದಂತೆ ಪುತ್ತೂರು ನಗರ ಠಾಣೆಯಲ್ಲಿ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಜು.18 ರಂದು ಬೆಳಿಗ್ಗೆ ಅಪ್ರಾಪ್ತ ಪ್ರಾಯದ ಇಬ್ಬರು ಬಾಲಕಿಯರು ಮನೆಯಿಂದ ವ್ಯಾಸಾಂಗ ಮಾಡುತ್ತಿರುವ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಲೇಜಿಗೆ ಬರುತ್ತಿರುವಾಗ ದಾರಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವ ಸದರಿ ಬಾಲಕಿಯರೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದು, ಬಾಲಕಿಯರು ಆತನಿಂದ ತಪ್ಪಿಸಿಕೊಂಡು ಕಾಲೇಜಿಗೆ ಬಂದು ಘಟನೆಯ ಬಗ್ಗೆ ಕಾಲೇಜಿನ ಉಪನ್ಯಾಸಕಿಗೆ ತಿಳಿಸಿದ್ದಾರೆ
ಸದರಿ ಉಪನ್ಯಾಸಕಿಯವರು ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕಲಂ: 341, 354(ಡಿ) ಐ.ಪಿ.ಸಿ ಕಲಂ: 8,12 ಪೊಕ್ಸೋ ಆಕ್ಟ್ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
























