ಮಂಗಳೂರು : ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಬುಧವಾರ ಸಂಭವಿಸಿದೆ.
ಮೃತ ಯುವಕನನ್ನು ವಿದ್ಯಾರ್ಥಿ ಮಹಮ್ಮದ್ ನಶತ್(21) ಎಂದು ಗುರುತಿಸಲಾಗಿದೆ.
ಅಡ್ಯಾರ್ ನ ಸಹ್ಯಾದ್ರಿ ಕಾಲೇಜು ಮುಂಭಾಗ ಅವಘಡ ಸಂಭವಿಸಿದೆ.
ಮಹಮ್ಮದ್ ನಶತ್ ಮೂಲತಃ ಉಪ್ಪಳದವರಾಗಿದ್ದು, ಕಾಲೇಜಿಗೆ ತೆರಳುತ್ತಿರುವಾಗ ಅಪಘಾತ ಸಂಭವಿಸಿದೆ.

























