ಪುತ್ತೂರು : ಯುವ ಬಂಟರ ಸಂಘ ಪುತ್ತೂರು ತಾಲೂಕು ಇದರ ಆಶ್ರಯದಲ್ಲಿ ಯುವ ಬಂಟರ ದಿನಾಚರಣೆಯ ಪ್ರಯುಕ್ತ ಜು.23 ರಂದು ‘ತುಳುನಾಡ ಬಂಟೆರೆ ಪರ್ಬ-2023’ ಎನ್ನುವ ವಿಶಿಷ್ಟ ಸಾಂಸ್ಕೃತಿಕ ಸ್ಪರ್ಧೆಗಳು ಪುತ್ತೂರು ಕೊಂಬೆಟ್ಟು ಎಂ.ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದೆ ಎಂದು ಯುವ ಬಂಟರ ಸಂಘದ ಅಧ್ಯಕ್ಷ ಶಶಿರಾಜ್ ರೈ ಮುಂಡಾಳಗುತ್ತು ರವರು ತಿಳಿಸಿದ್ದಾರೆ.
ತುಳುನಾಡ ಬಂಟೆರೆ ಪರ್ಬ ಕಾರ್ಯಕ್ರಮದಲ್ಲಿ ತುಳುನಾಡು ಮತ್ತು ಬಂಟ ಸಂಸ್ಕೃತಿಯ ಪ್ರದರ್ಶನಕ್ಕೆ ಮಾತ್ರ ಅವಕಾಶವನ್ನು ನೀಡಲಾಗಿದೆ. ಕಳೆದ ವರ್ಷ ನನ್ನ ಅವಧಿಯಲ್ಲಿ ಹಿರಿಯ ಬಂಟ ಚೇತನಗಳ ಸ್ಮರಣೆ ಮಾಡುವ ‘ಬಂಟ ಸ್ಮೃತಿ’ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದೇವೆ.
ಈ ಬಾರಿ ಗಾಂಧಿವಾದಿಯಾಗಿ ಪುತ್ತೂರಿನ ಅಭಿವೃದ್ಧಿಗೆ ಬಹಳಷ್ಟು ಕೊಡುಗೆಯನ್ನು ನೀಡಿರುವ ನಿವೃತ್ತ ತಹಶೀಲ್ದಾರ್ ಚಿಲ್ಮೆತ್ತಾರು ಕೋಚಣ್ಣ ರೈ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮರಥವನ್ನು ಸಮರ್ಪಿಸಿದ ಜಯಕರ್ನಾಟಕ ಸಂಸ್ಥಾಪಕ ಎನ್. ಮುತ್ತಪ್ಪ ರೈ ಹಾಗೂ ಬೆಂಗಳೂರು ಬಂಟರ ಸಂಘದ ಅಧ್ಯಕ್ಷರಾಗಿ ಹಲವಾರು ಬಂಟರ ಅಭಿವೃದ್ಧಿಗೆ ಸಹಕಾರಿಯಾಗಿದ್ದ ಡಾ. ಮುಂಡಾಳಗುತ್ತು
ತಿಮ್ಮಪ್ಪ ರೈ ರವರುಗಳ ಸ್ಮೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಸವಣೂರು ವಿಶ್ವಜಿತ್ ಶೆಟ್ಟಿಯವರು ಬಂಟ ಸಮಾಜದ ಪರವಾಗಿ ಗೌರವ ಸ್ವೀಕರಿಸಲಿದ್ದಾರೆ.
ಕಾರ್ಯಕ್ರಮವನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್‌ಕುಮಾರ್ ರೈ ಮಾಲಾಡಿ ರವರು ಉದ್ಘಾಟಿಸಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ, ಮುಂಬಯಿ ಹೇರಂಭಾ ಗ್ರೂಪ್‌ನ ಆಡಳಿತ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿ, ಇಂಟರ್‌ನ್ಯಾಶನಲ್ ಸಿವಿಲ್ ಸರ್ವೆಂಟ್ ನಿತ್ಯಾನಂದ ಶೆಟ್ಟಿ, ಮುಂಬಯಿ ನಿವೃತ್ತ ಪೊಲೀಸ್ ಡೆಪ್ಯುಟಿ ಕಮಿಷನರ್ ಶಾರ್ಪ್ ಶೂಟರ್ ಖ್ಯಾತಿಯ ಪ್ರಕಾಶ್ ಭಂಡಾರಿ, ಕ್ಯಾಪ್ಟನ್ ಬ್ರಿಜೇಶ್ ಚೌಟ, ಮಂಗಳೂರು ಮಹಾನಗರ ಪಾಲಿಕೆಯ ಜಂಟಿ ಆಯುಕ್ತೆ ವಾಣಿ ಎಸ್ ಆಳ್ವ, ಉದ್ಯಮಿಗಳಾದ ಗುಣರಂಜನ್ ಶೆಟ್ಟಿ, ಪ್ರಕಾಶ್ ರೈ ದೇರ್ಲ, ಮಾಜಿ ಶಾಸಕರಾದ
ಶಕುಂತಳಾ ಟಿ.ಶೆಟ್ಟಿ, ಮಲ್ಲಿಕಾ ಪ್ರಸಾದ್ ಸಹಿತ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಜೊತೆಯಾಗಲಿದ್ದಾರೆ.
ಈ ಕಾರ್ಯಕ್ರಮವು ಒಂದು ಈವೆಂಟ್ ರೀತಿಯಲ್ಲಿ ನಡೆಯಲಿದ್ದು, ಸಭಾ ಕಾರ್ಯಕ್ರಮವು ಚಿಕ್ಕದಾಗಿ ಚೊಕ್ಕದಾಗಿ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಖ್ಯಾತ ನಿರೂಪಕ ನಿತೇಶ್ ಎಕ್ಕಾರು ರವರು ಕಾರ್ಯಕ್ರಮದ ಮುಖ್ಯ ನಿರೂಪಕರಾಗಿರುತ್ತಾರೆ ಎಂದು ಶಶಿರಾಜ್ ರೈ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಕಾರ್ಯಕ್ರಮದ ಮಧ್ಯೆ ನಮ್ಮನ್ನು ರಂಜಿಸಲು ನಮ್ಮೂರಿನ ಬಂಟ ತಾರೆಯರಾದ ವಿಜಯ ಕುಮಾರ್ ಕೊಡಿಯಾಲ್‌ಬೈಲ್, ರೂಪೇಶ್ ಶೆಟ್ಟಿ, ರಚನಾ ಶೆಟ್ಟಿ, ಯಶ್ ಶೆಟ್ಟಿ, ದೀಪಕ್ ರೈ ಪಾಣಾಜೆ, ಸುಂದರ ರೈ ಮಂದಾರ, ಗಾಯಕ ನಿಶಾನ್ ರೈ ಮಠಂತಬೆಟ್ಟು, ಸಂಗೀತ ನಿರ್ದೇಶಕ ಪ್ರಸಾದ್, ಪ್ರೋ ಕಬಡ್ಡಿ ಆಟಗಾರ ಪ್ರಶಾಂತ್ ರೈ ಕೈಕಾರ ಸೇರಿದಂತೆ ಹಲವಾರು ಮಂದಿ ಸಾಧಕರು ಭಾಗವಹಿಸಲಿದ್ದಾರೆ ಎಂದು ಶಶಿರಾಜ್ ರೈ ಮುಂಡಾಳಗುತ್ತು ತಿಳಿಸಿದರು.
ತುಳುನಾಡ ಬಂಟೆರೆ ಪರ್ಬ ಕಾರ್ಯಕ್ರಮ ವೈಶಿಷ್ಟ್ಯ ಪೂರ್ಣವಾದ ಕಾರ್ಯಕ್ರಮವಾಗಿ ಮೂಡಿಬರಲಿದೆ. ಸುಮಾರು 3 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಲಿದ್ದಾರೆ. ಮಧ್ಯಾಹ್ನದ ಭೋಜನದ ವ್ಯವಸ್ಥೆ ಮುತ್ತಪ್ಪ ರೈಯವರ ಕುಟುಂಬಸ್ಥರು ಮತ್ತು ಮನೆಯವರಿಂದ ನಡೆಯಲಿದೆ.
ಬೆಳಿಗ್ಗೆ 9 ರಿಂದ ಸಂಜೆ 6ರ ತನಕ ನಿರಂತರವಾಗಿ ನಡೆಯುವ ಕಾರ್ಯಕ್ರಮದಲ್ಲಿ ಬಂಟ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರೋತ್ಸಾಹವನ್ನು ನೀಡಬೇಕಾಗಿ. ಕಾರ್ಯಕ್ರಮವು ಬಂಟರ ಯಾನೆ ನಾಡವರ ಮಾತೃಸಂಘ, ಪುತ್ತೂರು ತಾಲೂಕು ಸಮಿತಿ, ತಾಲೂಕು ಬಂಟರ, ಮಹಿಳಾ ಹಾಗೂ ವಿದ್ಯಾರ್ಥಿ ಬಂಟರ ಸಂಘದ ಸಹಕಾರದಲ್ಲಿ ನಡೆಯಲಿದೆ.
ಯುವ ಬಂಟರ ಸಂಘದ ಆಶ್ರಯದಲ್ಲಿ ಪ್ರತಿ ವರ್ಷ ನಡೆಯುವ ಗಣಹೋಮ, ಶ್ರೀ ಸತ್ಯನಾರಾಯಣ ಪೂಜೆಯು ಜು. 22 ರಂದು ಪುತ್ತೂರು ಬಂಟರ ಭವನದಲ್ಲಿ ಬೆಳಿಗ್ಗೆ ನಡೆಯಲಿದೆ. ಎಂದು ಯುವ ಬಂಟರ ಸಂಘ ಪುತ್ತೂರು ತಾಲೂಕು ಅಧ್ಯಕ್ಷ ಶಶಿರಾಜ್ ರೈ ಮುಂಡಾಳಗುತ್ತು ತಿಳಿಸಿದ್ದಾರೆ.
ಕಾರ್ಯಕ್ರಮದ ಸಂಚಾಲಕರುಗಳಾದ ಹರ್ಷಕುಮಾರ್ ರೈ ಮಾಡಾವು, ಭಾಗ್ಯೇಶ್ ರೈ ಕೆಯ್ಯೂರು, ತಾಲೂಕು ಯುವ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ರಂಜಿನಿ ಶೆಟ್ಟಿ, ಕೋಶಾಧಿಕಾರಿ ಅಶೋಕ್ ಶೆಟ್ಟಿ ಕೆ.ಸಿ. ಉಪಾಧ್ಯಕ್ಷ ಗಣೇಶ್ ಶೆಟ್ಟಿ ನೆಲ್ಲಿಕಟ್ಟೆ, ರವಿಪ್ರಸಾದ್ ಶೆಟ್ಟಿ ಬನ್ನೂರು, ವಿದ್ಯಾರ್ಥಿ ಬಂಟರ ಸಂಘದ ಅಧ್ಯಕ್ಷ ಪವನ್ ಶೆಟ್ಟಿ ಕಂಬಳತಡ್ಡ ಪ್ರತಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.























