ಪುತ್ತೂರು: ನೇರಳಕಟ್ಟೆಯಲ್ಲಿ ಮರವೊಂದು ರಸ್ತೆಗೆ ಅಡ್ಡವಾಗಿ ಬಿದ್ದಿದ್ದು, ಸಂಚಾರಕ್ಕೆ ತೊಡಕಾಗಿದೆ.

ಭಾರೀ ಮಳೆಗೆ ಮರ ಹೆದ್ದಾರಿಗೆ ಅಡ್ಡವಾಗಿ ಬಿದ್ದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.
ಮರ ಬೀಳುವಾಗ ಅದರೊಂದಿಗೆ ವಿದ್ಯುತ್ ಕಂಬಗಳು, ತಂತಿ ನೆಲದ ಮೇಲೆ ಬಿದ್ದಿದೆ.
ಘಟನೆಯಿಂದಾಗಿ ಮಾಣಿ-ಮೈಸೂರು ಹೆದ್ದಾರಿ ರಸ್ತೆ ಸಂಚಾರಕ್ಕೆ ತೊಡಕಾಗಿದ್ದು, ಸುಮಾರು ಒಂದು ತಾಸುಗಿಂತಲೂ ಹೆಚ್ಚು ಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಎರಡು ಬದಿಯ ವಾಹನಗಳು ರಸ್ತೆಯುದ್ದಕ್ಕೂ ಸಾಲುಗಟ್ಟಿ ನಿಂತಿವೆ.
ಮರ ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ..
























