ಪುತ್ತೂರು : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬನ್ನೂರು ವಾರ್ಡ್ ಸಮಿತಿ ವತಿಯಿಂದ ಅರ್ಹ ಕುಟುಂಬಕ್ಕೆ ದಾನಿಗಳ ಸಹಕಾರದಿಂದ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮ ಜು.23 ರಂದು ಬನ್ನೂರಿನಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಪಿಐ ಬನ್ನೂರು ವಾರ್ಡ್ ಸಮಿತಿ ಅಧ್ಯಕ್ಷರಾದ ಮಹಮ್ಮದ್ ಹುಸೇನ್ ವಹಿಸಲಿದ್ದಾರೆ.
ಎಸ್‌ಡಿಪಿಐ ದ.ಕ ಜಿಲ್ಲಾ ಸಮಿತಿ ಅಧ್ಯಕ್ಷರಾದ ಅನ್ವರ್ ಸಾದಾತ್ ಬಜತ್ತೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪುತ್ತೂರು ನಗರ ಸಭಾ ಸದಸ್ಯರಾದ ಕೆ. ಫಾತಿಮತ್ ಝೂರಾ ನೂತನ ಮನೆಯ ಕೀ ಹಸ್ತಾಂತರಿಸಲಿದ್ದಾರೆ.
ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

























