ಪುತ್ತೂರು : ಯುವ ಬಂಟರ ಸಂಘ ಪುತ್ತೂರು ತಾಲೂಕು ಇದರ ಆಶ್ರಯದಲ್ಲಿ ಯುವ ಬಂಟರ ದಿನಾಚರಣೆಯ ಪ್ರಯುಕ್ತ ಜು.23 ರಂದು ‘ತುಳುನಾಡ ಬಂಟೆರೆ ಪರ್ಬ-2023’ ಎನ್ನುವ
ವಿಶಿಷ್ಟ ಸಾಂಸ್ಕೃತಿಕ ಸ್ಪರ್ಧೆಗಳು ಪುತ್ತೂರು ಕೊಂಬೆಟ್ಟು ಎಂ.ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದ್ದು, ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಹಾಗೆಯೇ ಭರದಿಂದ ಸಿದ್ಧತೆಗಳು ನಡೆಯುತ್ತಿದೆ.

ತುಳುನಾಡ ಬಂಟೆರೆ ಪರ್ಬ ಕಾರ್ಯಕ್ರಮ ವೈಶಿಷ್ಟ್ಯ ಪೂರ್ಣವಾದ ಕಾರ್ಯಕ್ರಮವಾಗಿ ಮೂಡಿಬರಲಿದ್ದು, ಸುಮಾರು 3 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಲಿದ್ದಾರೆ.
ಬೆಳಿಗ್ಗೆ 9 ರಿಂದ ಸಂಜೆ 6ರ ತನಕ ನಿರಂತರವಾಗಿ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮವು ಬಂಟರ ಯಾನೆ ನಾಡವರ ಮಾತೃಸಂಘ, ಪುತ್ತೂರು ತಾಲೂಕು ಸಮಿತಿ, ತಾಲೂಕು ಬಂಟರ, ಮಹಿಳಾ ಹಾಗೂ ವಿದ್ಯಾರ್ಥಿ ಬಂಟರ ಸಂಘದ ಸಹಕಾರದಲ್ಲಿ ನಡೆಯಲಿದೆ.

ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.



























