ಪುತ್ತೂರು : ಆರ್ಯಾಪು ಹಾಗೂ ನಿಡ್ಪಳ್ಳಿ ಗ್ರಾಮ ಪಂಚಾಯತ್‌ನಲ್ಲಿ
ಇಬ್ಬರು ಸದಸ್ಯರ ನಿಧನದಿಂದಾಗಿ ತೆರವಾಗಿರುವ ಎರಡು ಸ್ಥಾನಗಳಿಗೆ ಇಂದು (ಜು.23) ಉಪಚುನಾವಣೆ ನಡೆಯುತ್ತಿದ್ದು, ಭಾರೀ ಮಳೆಯ ನಡುವೆಯೂ ಮತದಾರರು ಆಗಮಿಸಿ ಬಿರುಸಿನಿಂದ ಮತದಾನ ಮಾಡುತ್ತಿದ್ದಾರೆ.
ಆರ್ಯಾಪು ಹಾಗೂ ನಿಡ್ಪಳ್ಳಿ ಗ್ರಾಮ ಪಂಚಾಯತ್‌ನಲ್ಲಿ ಇಂದು ಮುಂಜಾನೆಯಿಂದಲೇ ಮತದಾನ ಆರಂಭವಾಗಿದ್ದು, ಮಳೆಯ ನಡುವೆಯೂ ಮತದಾರರು ಆಗಮಿಸಿ ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ.
ನಿಡ್ಪಳ್ಳಿ ಗ್ರಾಮ ಪಂಚಾಯತ್ :


ಆರ್ಯಾಪು ಗ್ರಾಮ ಪಂಚಾಯತ್


ಆರ್ಯಾಪು ಗ್ರಾ.ಪಂ.ನಲ್ಲಿ 3 ಹಾಗೂ ನಿಡ್ಪಳ್ಳಿ ಗ್ರಾ.ಪಂ.ನಲ್ಲಿ 3 ಮಂದಿ ಕಣದಲ್ಲಿದ್ದಾರೆ.
ಅಂತಿಮ ಕಣದಲ್ಲಿ ಯಾರ್ಯಾರು !??
ನಿಡ್ಪಳ್ಳಿ ಗ್ರಾಮ ಪಂಚಾಯತ್ ನಿಂದ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಯಾಗಿ ಜಗನ್ನಾಥ್ ರೈ ಕೊಳೆಂಬೆತ್ತಿಮಾರು, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಚಂದ್ರಶೇಖರ ಪ್ರಭು ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಸತೀಶ್ ಶೆಟ್ಟಿ.
ಆರ್ಯಾಪು ಗ್ರಾಮ ಪಂಚಾಯತ್ ನಿಂದ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಬಲ್ಯಾಯ ದೊಡ್ಡಡ್ಕ, ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾಗಿ ಜಗದೀಶ್ ಭಂಡಾರಿ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಜಿ.ಪುರುಷೋತ್ತಮ ಪ್ರಭು ಅಂತಿಮ ಕಣದಲ್ಲಿದ್ದಾರೆ.























