ವಿಟ್ಲ : ನಾಯಿಯ ಪ್ರಾಣ ಉಳಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಲಾರಿ ಪಲ್ಟಿಯಾದ ಘಟನೆ ವಿಟ್ಲ ಕೆಲಿಂಜ ಕೊಟ್ಟಾರಿಕಟ್ಟೆಯಲ್ಲಿ ನಡೆದಿದೆ.

ಮಂಗಳೂರಿನಿಂದ ಪೆರ್ಲ ಕಡೆ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕ ಲಾರಿಯೊಳಗೆ ಸಿಲುಕಿದ್ದು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಲಾರಿಯೊಳಗೆ ಸಿಲುಕಿಕೊಂಡ ಚಾಲಕನನ್ನು ಸ್ಥಳೀಯರು ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ.


























