ವಿಟ್ಲ : ರಸ್ತೆಯ ಚರಂಡಿಯ ಶುಚೀಕರಣದ ಸಂದರ್ಭದಲ್ಲಿ ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗಣೇಶ್ ಪೂಜಾರಿಯವರ ಮೇಲೆ ಕಾಂಗ್ರೆಸ್ ವಲಯ ಅಧ್ಯಕ್ಷ ಸತೀಶ್ ಪೂಜಾರಿ ಬಾಕಿಲ ಮತ್ತು ತಂಡ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಗಾಯಾಳು ಗಣೇಶ್ ಪೂಜಾರಿ ಪುತ್ತೂರು ಆದರ್ಶ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜನಪ್ರತಿನಿಧಿ ಮೇಲಿನ ದಾಳಿ ಪ್ರಕರಣದ ಮಾಹಿತಿ ಪಡೆದ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ತಕ್ಷಣವೇ ಕಾನೂನು ಕ್ರಮ ಕೈಗೊಂಡು ಆರೋಪಿಗಳನ್ನು ಬಂಧಿಸಿ, ಮುಂದಿನ ದಿನಗಳಲ್ಲಿ ಶಾಂತಿ ಕದಡುವ ಇಂತಹ ಕೃತ್ಯಗಳು ಪುನರಾವರ್ತನೆಯಾಗದಂತೆ ತಡೆಯಬೇಕೆಂದು ಪೊಲೀಸ್ ಇಲಾಖೆಗೆ ಎಚ್ಚರಿಕೆ ನೀಡಿದ್ದಾರೆ.

























