ನೆಲ್ಯಾಡಿ : ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಹಿಂಭಾಗದಿಂದ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಣ್ಣಂಪಾಡಿ ಎಂಬಲ್ಲಿ ನಡೆದಿದೆ.
ಮೃತ ಬೈಕ್ ಸವಾರನನ್ನು ನೆಲ್ಯಾಡಿ ಮೊರಂಕಳ ನಿವಾಸಿ ಇಕ್ವಾಲ್ ಎಂದು ಗುರುತಿಸಲಾಗಿದೆ.

ಮೃತ ಇಕ್ವಾಲ್ ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಸಣ್ಣಂಪಾಡಿ ಸಮೀಪ ಕೆಟ್ಟು ನಿಂತಿದ್ದ ಪಾರ್ಸೆಲ್ ಸಾಗಾಟದ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.
ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.


























