ಪುತ್ತೂರು : ಆರ್ಯಾಪು ಹಾಗೂ ನಿಡ್ಪಳ್ಳಿ ಗ್ರಾಮ ಪಂಚಾಯತ್‌ನಲ್ಲಿ ಇಬ್ಬರು ಸದಸ್ಯರ ನಿಧನದಿಂದಾಗಿ ತೆರವಾಗಿರುವ ಎರಡು ಸ್ಥಾನಗಳಿಗೆ ಜು.23 ರಂದು ಉಪಚುನಾವಣೆ ನಡೆದಿದ್ದು, ಇದೀಗ ಫಲಿತಾಂಶ ಪ್ರಕಟಗೊಂಡಿದೆ.

ಪುತ್ತೂರು ತಾಲೂಕು ಕಚೇರಿಯಲ್ಲಿ ಮತ ಎಣಿಕೆ ಪೂರ್ಣಗೊಂಡಿದ್ದು, ಭಾರೀ ಪೈಪೋಟಿ ಹೊಂದಿದ್ದ ನಿಡ್ಪಳ್ಳಿ ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸತೀಶ್ ಶೆಟ್ಟಿ ಜಯಭೇರಿ ಬಾರಿಸಿದ್ದಾರೆ.
ಜಗನ್ನಾಥ ರೈ-208, ಸತೀಶ್ ಶೆಟ್ಟಿ-235, ಚಂದ್ರಶೇಖರ-85 ಮತ ಪಡೆದಿದ್ದಾರೆ. 1 ಮತ ತಿರಸ್ಕೃತಗೊಂಡಿದೆ.
ಈ ಮೊದಲು ನಿಡ್ಪಳ್ಳಿ ಗ್ರಾಮ ಪಂಚಾಯತ್ ನಲ್ಲಿ ಸದಸ್ಯರಾಗಿದ್ದ ಮುರಳೀಕೃಷ್ಣ ಭಟ್ ಅಪಘಾತದಲ್ಲಿ ಮೃತರಾಗಿದ್ದ ಹಿನ್ನೆಲೆ ಆ ಸ್ಥಾನ ತೆರವಾಗಿತ್ತು.
ನಿಡ್ಪಳ್ಳಿ ಗ್ರಾಮ ಪಂಚಾಯತ್ ನಿಂದ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಜಗನ್ನಾಥ್ ರೈ ಕೊಳೆಂಬೆತ್ತಿಮಾರು, ಬಿಜೆಪಿ ಬೆಂಬಲಿತ ಅಭ್ಯರ್ಥಿ ಚಂದ್ರಶೇಖರ ಪ್ರಭು ಕಣದಲ್ಲಿದ್ದರು.


























