ನವದೆಹಲಿ: ಭಾರತೀಯ ಜನತಾ ಪಕ್ಷ ತನ್ನ ರಾಷ್ಟ್ರೀಯ ಮಂಡಳಿಯನ್ನು ಪುನರ್ ರಚಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿಗೆ ಅವರಿಗೆ ಕೊಕ್ ನೀಡಲಾಗಿದೆ.
ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎಲ್. ಸಂತೋಷ್ ಅವರನ್ನು ಮುಂದುವರೆಸಲಾಗಿದೆ.
ತೆಲಂಗಾಣದ ಸಂಜಯ್ ಬಂಡಿಗೆ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ. ಎಂಟು ನಾಯಕರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾಗಿ ನೇಮಕ ಮಾಡಲಾಗಿದೆ.
13 ನಾಯಕರನ್ನು ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ವರದಿಗಳ ಪ್ರಕಾರ ಸಿಟಿ ರವಿ ಅವರು, ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ರೇಸ್ನಲ್ಲಿದ್ದಾರೆ ಎಂದು ಹೇಳಲಾಗಿದೆ. ಈಗಾಗಲೇ ನಳಿನ್ ಕುಮಾರ್ ಕಟೀಲ್ ಅವರ ರಾಜ್ಯಾಧ್ಯಕ್ಷ ಸ್ಥಾನದ ಅವಧಿ ಮುಕ್ತಾಯಗೊಂಡಿದೆ. ಹೀಗಾಗಿ ಕರ್ನಾಟಕ ಬಿಜೆಪಿ ಅಧ್ಯಕ್ಷ ಯಾರು ಆಗ್ತಾರೆ ಅನ್ನೋದು ಕುತೂಹಲ ಮೂಡಿಸಿದೆ.
ಸಿಟಿ ರವಿ ಕೂಡ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಎನ್ನಲಾಗಿದೆ. ಹೀಗಾಗಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸ್ಥಾನದಿಂದ ಕಳಗೆ ಇಳಿಸಿ, ರಾಜ್ಯಾಧ್ಯಕ್ಷ ಹುದ್ದೆ ನೀಡುತ್ತಾ ಅನ್ನೋ ಚರ್ಚೆ ಇದೀಗ ರಾಜಕೀಯ ವಲಯದಲ್ಲಿ ಜೋರಾಗಿದೆ.
भाजपा राष्ट्रीय अध्यक्ष श्री @JPNadda ने निम्नलिखित केंद्रीय पदाधिकारियों के नामों की घोषणा की है- pic.twitter.com/0aaArxHF30
— BJP (@BJP4India) July 29, 2023



























