ವಿಟ್ಲ : ಅಪ್ರಾಪ್ತ ದಲಿತ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಮೂಡಬಿದರೆ ಮೂಲದ ಪ್ರಸ್ತುತ ಬೆರಿಪದವಿ ನಿವಾಸಿ ಅಕ್ಷಯ್ ದೇವಾಡಿಗ (24), ಬಾಯಾರು ಗ್ರಾಮದ ಕೊಜಪ್ಪ ನಿವಾಸಿ ಕಮಲಾಕ್ಷ ಬೆಳ್ಚಾಡ (30), ಬೆರಿಪದವು ನಿವಾಸಿ ಸುಕುಮಾರ ಬೆಳ್ಚಾಡ (28) ಸಹಿತ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಅಕ್ಷಯ್ ಬೆರಿಪದವಿನಲ್ಲಿ ಅಣ್ಣನ ಮನೆಯಲ್ಲಿದ್ದುಕೊಂಡು ಪೈಟಿಂಗ್ ಕೆಲಸ ನಿರ್ವಹಿಸುತ್ತಿದ್ದರೆ. ಕಮಲಾಕ್ಷ ಗಾರೆ ಕೆಲಸ ಹಾಗೂ ಸುಕುಮಾರ ಚಾಲಕ ವೃತ್ತಿಯನ್ನು ನಡೆಸಿಕೊಂಡಿದ್ದರು.
ವಿಟ್ಲ ಠಾಣೆಯಲ್ಲಿ ಫೋಕ್ಸೋ ಹಾಗೂ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದ್ದು, ಯುವತಿ ನೀಡಿದ ಮಾಹಿತಿಯಂತೆ ಐವರನ್ನು ಬಂಧನ ಮಾಡಲಾಗಿದೆ.
ಅಪ್ರಾಪ್ತ ಬಾಲಕಿಯನ್ನು 2019ನೇ ಇಸವಿಯಲ್ಲಿ ಆಕೆಯ ಸಂಬಂಧಿಕರ ಮನೆಯಲ್ಲಿ ಅವರ ಆರೋಪಿ ಜಯಪ್ರಕಾಶ್ ಎಂಬಾತನು ಅತ್ಯಾಚಾರ ನಡೆಸಿದ್ದಾನೆ. ಕಳೆದ ಜನವರಿ ತಿಂಗಳಿನಲ್ಲಿ ಅಚ್ಚು ಯಾನೆ ಅಕ್ಷಯ್ ಎಂಬವನು ಬೆರಿಪದವು ಶಾಲೆಯ ಬಳಿಗೆ ಬಂದು ಬೇರೆ ಬೇರೆ ದಿನಗಳಲ್ಲಿ 3 ಬಾರಿ ಅತ್ಯಾಚಾರ ನಡೆಸಿರುತ್ತಾನೆ. ಕಳೆದ ಮೇ ತಿಂಗಳಿನಲ್ಲಿ ಬೆರಿಪದವು ರಾಜ ಎಂಬವರು ಬಾಲಕಿಗೆ ಫೋನು ಮಾಡಿ ಮಾತನಾಡುಕೊಂಡಿದ್ದು, ಬೆರಿಪದವು ವಿದ್ಯಾರಣ್ಯ ಶಾಲೆಯ ಗುಡ್ಡ ಜಾಗಕ್ಕೆ ಬರಲು ಹೇಳಿದಂತೆ ಹೋದ ಬಾಲಕಿಯನ್ನು ಮದುವೆಯಾಗುತ್ತೇನೆಂದು ಪುಸಲಾಯಿಸಿ ಆಕೆಯ ಇಚ್ಚೆ ವಿರುದ್ದವಾಗಿ ಅತ್ಯಾಚಾರ ನಡೆಸಿರುತ್ತಾನೆ.
ಕಳೆದ ಜೂನ್ ತಿಂಗಳಿನ ಮೊದಲ ವಾರದಲ್ಲಿ ಅಚ್ಚು@ಅಕ್ಷಯ್ ನ ಮುಖಾಂತರ ಸುಕುಮಾರ ಪರಿಚಯಿಸಿಕೊಂಡು ಮುದುವೆಯಾಗುತ್ತೇನೆಂದು ಬೆರಿಪದವು ಎಂಬಲ್ಲಿಗೆ ಬರಲು ಹೇಳಿ ಅಲ್ಲಿನ ವಿದ್ಯಾರಣ್ಯ ಶಾಲೆಯ ಗುಡ್ಡ ಜಾಗದಲ್ಲಿ ಬಾಲಕಿಯ ಇಚ್ಚೆಗೆ ವಿರುದ್ದವಾಗಿ ಅತ್ಯಾಚಾರ ನಡೆಸಿರುತ್ತಾನೆ. ಅಲ್ಲದೆ ದಿನಾಂಕ 28.07.2023 ರಂದು ರಾತ್ರಿ ವೇಳೆಯಲ್ಲಿ ಕಮಾಲಾಕ್ಷ ಬೆಳ್ಚಡನು ಮದುವೆಯಾಗುತ್ತೇನೆಂದು ಭರವಸೆಯನ್ನು ನೀಡಿ, ಆತನ ಮನೆಯಾದ ಬಾಯಾರು ಗ್ರಾಮದಲ್ಲಿರುವ ಅವರ ಸಂಬಂಧಿಯವರ ಖಾಲಿ ಮನೆಗೆ ಬರಲು ಹೇಳಿದ ಮೇರೆಗೆ ನೊಂದ ಬಾಲಕಿಯು ಹೋದಾಗ ಆ ಮನೆಯ ಕೋಣೆಯಲ್ಲಿ ನೊಂದ ಬಾಲಕಿಯ ಇಚ್ಚೆಗೆ ವಿರುದ್ದವಾಗಿ ಬಲಾತ್ಕಾರವಾಗಿ ಸಂಭೋಗ ನಡೆಸಿರುತ್ತಾನೆ. ಈ ಎಲ್ಲ ಘಟನೆಯನ್ನು ಬಾಲಕಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದು, ಅದರಂತೆ ಪೋಕ್ಸೋ , ಅತ್ಯಾಚಾರ ಪ್ರಕರಣ ದಾಖಲಾಗಿದೆ.
























