ಪುತ್ತೂರು : ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದಿದ್ದ ಸುಚಿತ್ರ (30) ರವರು ತೆಂಗಿನ ಮರದಿಂದ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ಪ್ರಮೋದ್ ಬೊಳ್ಳಾಜೆ ರವರ ಪತ್ನಿಯಾಗಿದ್ದ ಸುಚಿತ್ರ ರವರು ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದಿದ್ದರು.
ಸುಚಿತ್ರ ರವರ ಈ ಕಾಯಕಕ್ಕೆ ಮೆಚ್ಚುಗೆ ವ್ಯಕ್ತ ಪಡಿಸಿ ಹಲವಾರು ಸಂಘ-ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿತ್ತು.
ಇಂದು ಮನೆಯ ತೋಟದಲ್ಲಿ ತೆಂಗಿನ ಮರ ಹತ್ತಿದ್ದ ವೇಳೆ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.
ಮೃತರು ಪತಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ..