ಬೆಳ್ತಂಗಡಿ : ಚಾರ್ಮಾಡಿ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಮೂಲತಃ ಕಕ್ಕಿಂಜೆ ನಿವಾಸಿ, ಪ್ರಸ್ತುತ ಬಂಟ್ವಾಳ ತಾಲೂಕು ಸಜೀಪನಡು ಗ್ರಾಮದ ನೌಪಲ್ ಎಂದು ಗುರುತಿಸಲಾಗಿದೆ.
ಆರೋಪಿತನು ಚಾರ್ಮಾಡಿ ಗ್ರಾಮದ ಪಾಂಡಿಕಟ್ಟೆ ಎಂಬಲ್ಲಿ ಸಂಶಯಾಸ್ಪದ ರೀತಿಯಲ್ಲಿ ವರ್ತಿಸುತ್ತಿರುವ ಬಗ್ಗೆ ಸಂದೇಹಗೊಂಡು ವಿಚಾರಿಸುವ ಸಲುವಾಗಿ ಪೊಲೀಸರು ಆತನ ಬಳಿ ಬಂದಾಗ ಆತ ಓಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಈ ವೇಳೆ ಆತನ ಬಳಿ 150 ಗ್ರಾಂ. ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಅಂದಾಜು ಮೌಲ್ಯ 4ಸಾವಿರ ರೂ. ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ.
v