ಪುತ್ತೂರು : ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ವಿವೇಕಾನಂದ ಶಿಶುಮಂದಿರ, ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇದರ ಸಹಯೋಗದೊಂದಿಗೆ 25ನೇ ವರ್ಷದ “ಶ್ರೀಕೃಷ್ಣ ಲೋಕ” ಕಾರ್ಯಕ್ರಮವು ಸೆ.6 ರಂದು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದ ವೇದಿಕೆಯಲ್ಲಿ ನಡೆಯಲಿದೆ.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೇಶವ ಪ್ರಸಾದ್ ಮುಳಿಯ ರವರು ದೀಪ ಪ್ರಜ್ವಲನೆ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಯುಎಸ್ಎ ಹ್ಯೂಸ್ಟನ್ ಶ್ರೀಕೃಷ್ಣ ವೃಂದಾವನದ ಅರ್ಚಕರು ಮತ್ತು ವ್ಯವಸ್ಥಾಪಕರಾದ ರಘುರಾಮ ಭಟ್ ಮಣಿಕ್ಕರ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ದೈವ ನರ್ತಕರಾದ ಡಾ. ರವೀಶ್ ಪಡುಮಲೆ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.
ಕಾರ್ಯಕ್ರಮಗಳ ವಿವರ :
ವಿವೇಕಾನಂದ ಶಿಶುಮಂದಿರದ ಆವರಣದಲ್ಲಿ ಬೆಳಿಗ್ಗೆ 9.15ಕ್ಕೆ ಶ್ರೀ ಬಾಲಕೃಷ್ಣನ ತೊಟ್ಟಿಲ ಸಂಭ್ರಮ ನಡೆಯಲಿದೆ.
ಬೆಳಿಗ್ಗೆ 10 ಗಂಟೆಗೆ ಶ್ರೀಕೃಷ್ಣ-ರಾಧೆ, ಯಶೋಧೆ ವೇಷಧಾರಿ ಮಕ್ಕಳಿಂದ ಶೋಭಾಯಾತ್ರೆ ನಡೆಯಲಿದೆ.
ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

