ಪುತ್ತೂರು: ಬೆಂಗಳೂರು-ಮಂಗಳೂರು ಖಾಸಗಿ ಬಸ್ ನಲ್ಲಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಇಂದು ಬೆಳಿಗ್ಗೆ ಮುರದಲ್ಲಿ ವಶಕ್ಕೆ ಪಡೆದಿದ್ದಾರೆಂದು ವರದಿಯಾಗಿದೆ.
ಬೆಂಗಳೂರಿನಿಂದ ಪುತ್ತೂರಿಗೆ ಬಂದು ಮಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ನಲ್ಲಿ ಮಾದಕ ವಸ್ತು ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಪೊಲೀಸರು ಮುರದಲ್ಲಿ ಬಸ್ ತಡೆದು ಪರಿಶೀಲಿಸಿದಾಗ ಇಬ್ಬರು ಆರೋಪಿಗಳಲ್ಲಿ ಮಾದಕ ವಸ್ತು ಇರುವುದು ಬೆಳಕಿಗೆ ಬಂದಿದೆನ್ನಲಾಗಿದೆ.
ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ..

























