ಸುಬ್ರಹ್ಮಣ್ಯ : ವಾಹನದಲ್ಲಿ ಗೋ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರು ಪರಿಶೀಲಿಸಿದಾಗ ಆರೋಪಿಗಳು ಪರಾರಿಯಾದ ಘಟನೆ ಸುಬ್ರಹ್ಮಣ್ಯದ ಕುಲ್ಲುಂದ-ಬಿಸ್ಲೆ ರಸ್ತೆಯಲ್ಲಿ ನಡೆದಿದೆ.
ಆ.17 ರಂದು ಸಂಜೆ ವೇಳೆ ಸುಬ್ರಹ್ಮಣ್ಯ ಗ್ರಾಮದ ಕುಲ್ಲುಂದ-ಬಿಸ್ಲೆ ರಸ್ತೆಯಲ್ಲಿ ಸುಬ್ರಹ್ಮಣ್ಯ ಠಾಣಾ ಪೊಲೀಸರು ವಾಹನ ತಪಾಸಣೆ ಮಾಡುತ್ತಿರುವಾಗ ಸುಬ್ರಹ್ಮಣ್ಯ ಕಡೆಯಿಂದ ಬಂದ ಗೂಡ್ಸ್ ವಾಹನವೊಂದನ್ನು ನಿಲ್ಲಿಸಲು ಸೂಚನೆ ನೀಡಿದಾಗ ವಾಹನವನ್ನು ನಿಲ್ಲಿಸಿದ ಚಾಲಕ ಹಾಗೂ ವಾಹನದಲ್ಲಿದ್ದ ಇನ್ನೊಬ್ಬ ವ್ಯಕ್ತಿ ವಾಹನದಿಂದ ಇಳಿದು ಓಡಿ ಹೋಗಿದ್ದು, ವಾಹನವನ್ನು ಪರಿಶೀಲನೆ ನಡೆಸಿದಾಗ ಸದ್ರಿ ವಾಹನದಲ್ಲಿ 3 ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡುತ್ತಿರುವುದು ಕಂಡು ಬಂದಿರುತ್ತದೆ.
ಗೂಡ್ಸ್ ವಾಹನ ಹಾಗೂ 3 ಜಾನುವಾರುಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಕಲಂ:5,7,12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಭಂದಕ ಮತ್ತು ಸಂರಕ್ಷಣಾ ಕಾಯ್ದೆ-2020, ಹಾಗೂ ಕಲಂ:11(1)(a), 11(1)(d) ಪ್ರಾಣಿ ಹಿಂಸೆ ತಡೆ ಕಾಯ್ದೆ 1960 ಯಂತೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ..

























