ಬಂಟ್ವಾಳ : ರೋಗಿಯೊಬ್ಬರನ್ನು ಕೊಂಡುಹೋಗುತ್ತಿರುವ
ವೇಳೆ ಟುಫಾನ್ ಆಂಬ್ಯುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ನಡೆದಿದೆ.

ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಆಂಬ್ಯುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಘಟನೆಯಲ್ಲಿ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ
ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಶಬೀರ್ ಕ್ರಿಕೆಟ್ ಆಟಗಾರರಾಗಿದ್ದು, ಸಹರಾ ಸ್ಪೋರ್ಟ್ಸ್ ಕ್ಲಬ್ ಮಡಂತ್ಯಾರ್ ನ ಸಕ್ರಿಯ ಸದಸ್ಯರಾಗಿದ್ದರು..



























