ಧರ್ಮಸ್ಥಳ : ಯುವಕನೋರ್ವ ಮಹಿಳೆಯೋರ್ವರ ಜೊತೆ ಅನುಚಿತವಾಗಿ ವರ್ತಿಸಿದ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಮಹಿಳೆ ನೀಡಿದ ದೂರಿನ ಮೇರೆಗೆ ಮಹಿಳೆಯ ಮನೆಯ ಸಮೀಪ ವಾಸವಿರುವ ಮನೋಜ್ ಓ.ಆರ್. ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.
ಮಹಿಳೆಯು ತಮ್ಮ ಮನೆಯ ಬಚ್ಚಲು ಮನೆಗೆ ಹೋದಾಗ ಮಹಿಳೆಯ ನೆರೆಕೆರೆಯಲ್ಲಿ ವಾಸವಾಗಿರುವ ಮನೋಜ್ ಓ ಆರ್ ಎಂಬವನು ಬಚ್ಚಲು ಮನೆಗೆ ಅಕ್ರಮ ಪ್ರವೇಶ ಮಾಡಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದು, ಈ ವೇಳೆ ಮಹಿಳೆ ಬೊಬ್ಬೆ ಹೊಡೆದಾಗ ಆರೋಪಿಯು ಅಲ್ಲಿಂದ ಓಡಿ ಹೋಗಿದ್ದಾನೆಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಲಂ: 448, 354, 509 ಐಪಿಸಿ ಯಂತೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ..

























