ಪುತ್ತೂರು : ಯುವತಿಯೋರ್ವಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ನಡೆದಿದ್ದು, ಗಂಭೀರ ಗಾಯಗೊಂಡ ಯುವತಿಯನ್ನು ಮಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಹಿಂಭಾಗದ ಮಹಿಳಾ ಪೊಲೀಸ್ ಠಾಣೆಯ ಬಳಿ ಯುವಕನೋರ್ವ ಯುವತಿಯ ಕುತ್ತಿಗೆಗೆ ಚಾಕು ಇರಿದು ಕೊಲೆ ಯತ್ನ ನಡೆಸಿದ್ದು, ಗಂಭೀರ ಗಾಯಗೊಂಡ ಯುವತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಗಂಭೀರ ಗಾಯಗೊಂಡ ಯುವತಿಯನ್ನು ವಿಟ್ಲ ಮೂಲದ ಗೌರಿ (20) ಎನ್ನಲಾಗುತ್ತಿದ್ದು, ಕೊಲೆಗೆ ಯತ್ನಿಸಿದ ಯುವಕ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ.

ಆಸ್ಪತ್ರೆಗೆ ಹಿಂದೂ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ, ಮುರಳಿಕೃಷ್ಣ ಹಸಂತಡ್ಕ ಹಾಗೂ ಇತರರು ಭೇಟಿ ನೀಡಿದರು.


























