ಪುತ್ತೂರು : ಯುವತಿಯೋರ್ವಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ನಡೆದಿದ್ದು, ಗಂಭೀರ ಗಾಯಗೊಂಡ ಯುವತಿಯನ್ನು ಮಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಪ್ರಕರಣ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಗೌರಿ (18) ಗಂಭೀರ ಗಾಯಗೊಂಡ ಯುವತಿ. ಪದ್ಮರಾಜ್ ಚೂರಿ ಇರಿದ ಆರೋಪಿ.
ಸದ್ಯ ಚೂರಿ ಇರಿದ ಪದ್ಮರಾಜ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಮಾಹಿತಿ ನೀಡಿದ್ದಾರೆ.
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಹಿಂಭಾಗದ ಮಹಿಳಾ ಪೊಲೀಸ್ ಠಾಣೆಯ ಬಳಿ ಯುವಕನೋರ್ವ ಯುವತಿಯ ಕುತ್ತಿಗೆಗೆ ಚಾಕು ಇರಿದು ಕೊಲೆ ಯತ್ನ ನಡೆಸಿದ್ದು, ಗಂಭೀರ ಗಾಯಗೊಂಡ ಯುವತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

























