ಉಪ್ಪಿನಂಗಡಿ : ಮಹಿಳೆಯೋರ್ವರ ಮನೆಗೆ ಅಕ್ರಮ ಪ್ರವೇಶ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಿ ಠಾಣೆಗೆ ದೂರು ನೀಡಿದ ಘಟನೆ ನಡೆದಿದೆ.
ಬೆಳ್ತಂಗಡಿ ತಕ್ಕಾರು ಗ್ರಾಮದ ನಿವಾಸಿ ಮಹಿಳೆ ನೀಡಿದ ದೂರಿನಂತೆ ಮಹಮ್ಮದ್ ಕುಟೇಲು ಮತ್ತು ಇತರರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆ.24 ರಂದು ಮಹಮ್ಮದ್ ಕುಟೇಲು ಎಂಬಾತನು 5 ರಿಂದ 6 ಜನರನ್ನು ಸೇರಿಸಿಕೊಂಡು ಮಾರಕ ಆಯುಧಗಳೊಂದಿಗೆ ಅಕ್ರಮವಾಗಿ ಪ್ರವೇಶಿಸಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿರುವುದಲ್ಲದೇ, ಅಸ್ವಸ್ಥ ಮಗ ತಡೆಯಲು ಬಂದಾಗ ಆತನಿಗೆ ಹಲ್ಲೆ ನಡೆಸಿರುತ್ತಾರೆ. ಅವಾಚ್ಯ ಶಬ್ದಗಳಿಂದ ಬೈದು ಜೀವಬೆದರಿಕೆ ಒಡ್ಡಿ ಹೋಗಿರುತ್ತಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ 114/2023 ಕಲಂ:143,147,148,448,354,324,504,506,149 ಐಪಿಸಿ ಯಂತೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ..
























