ಪುತ್ತೂರು : ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ತಾಲೂಕು ಮಟ್ಟದ ವತಿಯಿಂದ ಬಿರುವೆರ್ನ ಕೆಸರ್ದ ಗೊಬ್ಬು ಕಾರ್ಯಕ್ರಮ ಆ.27 ರಂದು ಪುತ್ತೂರು ಕಾರ್ಜಾಲು ಗದ್ದೆಯಲ್ಲಿ ನಡೆಯಲಿದೆ.
ಬೆಳಿಗ್ಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.
ಕಬಕ ಬಿಲ್ಲವ ಗ್ರಾಮ ಸಮಿತಿಯ ಸ್ಥಾಪಕಾಧ್ಯಕ್ಷರಾದ ಜಿನ್ನಪ್ಪ ಪೂಜಾರಿ ಮುರ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಕಬಕ ಬಿಲ್ಲವ ಗ್ರಾಮ ಸಮಿತಿಯ ಅಧ್ಯಕ್ಷರಾದ ವಸಂತ ಪೂಜಾರಿ ಶೇವಿರೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕ ಅಶೋಕ್ ಕುಮಾರ್ ರೈ, ಮೆಸ್ಕಾಂ ಮಾಜಿ ನಿರ್ದೇಶಕರಾದ ಕಿಶೋರ್ ಕುಮಾರ್ ಬೊಟ್ಯಾಡಿ, ನಗರಸಭೆ ಅಧ್ಯಕ್ಷರಾದ ಜೀವಂಧರ್ ಜೈನ್, ಬನ್ನೂರು ರೈತರ ಸೇವಾ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಈಶ್ವರ್ ಭಟ್, ಕಬಕ ಬಿಲ್ಲವ ಗ್ರಾಮ ಸಮಿತಿಯ ಮಾಜಿ ಉಪಾಧ್ಯಕ್ಷರಾದ ವಸಂತ ಪೂಜಾರಿ, ಶೇಖರ ಪೂಜಾರಿ ಪಟ್ಲ, ಪ್ರವೀಣ ಪೂಜಾರಿ ಬಿರಾವು ಆಗಮಿಸಲಿದ್ದಾರೆ.
ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು, ಕಬಕ ಬಿಲ್ಲವ ಗ್ರಾಮ ಸಮಿತಿಯ ಅಧ್ಯಕ್ಷರಾದ ವಸಂತ ಪೂಜಾರಿ ಶೇವಿರೆ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷರಾದ ಸತ್ಯಜಿತ್ ಸುರತ್ಕಲ್ ಪ್ರಧಾನ ಭಾಷಣ ಮಾಡಲಿದ್ದಾರೆ.
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್., ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷರಾದ ಸತೀಶ್ ಕುಮಾರ್ ಕೆಡೆಂಜಿ, ಅಕ್ಷಯ ಕಾಲೇಜಿನ ಚೇರ್ಮನ್ ಜಯಂತ ನಡುಬೈಲು, ಬೆಳ್ತಂಗಡಿ ಗುರುದೇವ ಸಹಕಾರಿ ಬ್ಯಾಂಕ್ ನ ನಿರ್ದೇಶಕರಾದ ಡಾ. ರಾಜಾರಾಮ್ ಕೆ.ಬಿ., ಬಿಲ್ಲವ ಮಹಿಳಾ ವೇದಿಕೆ ಅಧ್ಯಕ್ಷರಾದ ವಿಮಲಾ ಸುರೇಶ್, ರಾಮಣ್ಣ ಪೂಜಾರಿ ಕಬಕ, ಪುತ್ತೂರು ಬಿಲ್ಲವ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೊನ್ನಪ್ಪ ಪೂಜಾರಿ ಕೈಂದಾಡಿ, ಶ್ರೀ ಗೆಜ್ಜೆಗಿರಿ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಪುತ್ತೂರು ವಿಷ್ಣು ಮೆಟಲ್ಸ್ ನ ಕೇಶವ ಪೂಜಾರಿ ಮುರ, ವಲಯ ಸಂಚಾಲಕರಾದ ಅಣ್ಣಿ ಪೂಜಾರಿ, ಸೇಸಪ್ಪ ಪೂಜಾರಿ ವಿಟ್ಲ ಭಾಗವಹಿಸಲಿದ್ದಾರೆ.




























