ವಿಟ್ಲ : ಶಾಲಾ ಕೊಠಡಿಯ ಬಾಗಿಲು ಮುರಿದು ಕಂಪ್ಯೂಟರ್ ಮಾನಿಟರ್ ಕಳವುಗೈದ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾಣಿ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ, ಕರ್ನಾಟಕ ಪ್ರೌಢಶಾಲೆ ಮಾಣಿ ಮತ್ತು ಕರ್ನಾಟಕ ಆಂಗ್ಲ ಮಾಧ್ಯಮ ಶಾಲೆ ಮಾಣಿ ಇದರ ಸಂಚಾಲಕರಾದ ಇಬ್ರಾಹಿಂ ಕೆ ನೀಡಿದ ದೂರಿನ ಮೇರೆಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಮಾಣಿ ಎಂಬಲ್ಲಿ ಕರ್ನಾಟಕ ಪ್ರೌಢ ಶಾಲೆ ಮತ್ತು ಕರ್ನಾಟಕ ಆಂಗ್ಲ ಮಾಧ್ಯಮ ಶಾಲೆ ಒಂದೇ ಆವರಣದಲ್ಲಿರುತ್ತದೆ. ಯಾರೋ ಕಳ್ಳರು ಶಾಲಾ ತರಗತಿ ಕೊಠಡಿ ಮತ್ತು ಶಾಲಾ ಆಫೀಸ್ ಕೊಠಡಿಯ ಬಾಗಿಲುಗಳ ಬೀಗವನ್ನು ಮುರಿದು ಒಳಪ್ರವೇಶಿಸಿ ಅಂದಾಜು ರೂ 7000/- ಮೌಲ್ಯದ ಕಂಫ್ಯೂಟರ್ ಮಾನಿಟರನ್ನು ಕಳ್ಳತನ ಮಾಡಿಕೊಂಡು ಹೋಗಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ 454,457,380 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

























