ಪುತ್ತೂರು : ಯಾದವ ಸಭಾ ಪ್ರಾದೇಶಿಕ ಸಮಿತಿ ಆರ್ಲಪದವು, ಪಾಣಾಜೆ ವತಿಯಿಂದ 17ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಕಾರ್ಯಕ್ರಮವು ಸ.6 ರಂದು ಆರ್ಲಪದವು ಪಾಣಾಜೆಯ ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂದಿರದ ವಠಾರದಲ್ಲಿ ನಡೆಯಲಿದೆ.
ಸುಬ್ಬಪ್ಪ ಮಣಿಯಾಣಿ ಪಡ್ಯಂಬೆಟ್ಟು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಹಾಗೂ ಗುರುಬೆಳದಿಂಗಳು ಫೌಂಡೇಶನ್ ನ ಅಧ್ಯಕ್ಷರಾದ ಪದ್ಮರಾಜ್ ಆರ್. ರವರು ಅಪರಾಹ್ನ ಬಳಿಕ ನಡೆಯುವ ಧಾರ್ಮಿಕ ಸಭೆ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯಾದವ ಸಭಾ ಪುತ್ತೂರು ತಾಲೂಕು ಸಮಿತಿಯ ಅಧ್ಯಕ್ಷರಾದ ಶ್ರೀಪ್ರಸಾದ್ ಪಾಣಾಜೆ ವಹಿಸಲಿದ್ದಾರೆ.
ಶಾಸಕರಾದ ಅಶೋಕ್ ಕುಮಾರ್ ರೈ ಬಹುಮಾನ ವಿತರಣೆ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಸಂಜೀವ ಮಠಂದೂರು, ಪುತ್ತೂರು ಶ್ರೀರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕರಾದ ಹೇಮಾನಾಥ ಶೆಟ್ಟಿ ಕಾವು, ಹಿಂದೂ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ, ಪ್ರಗತಿಪರ ಕೃಷಿಕರಾದ ಲಕ್ಷ್ಮೀನಾರಾಯಣ ರೈ ಕೆದಂಬಾಡಿ, ಯಾದವ ಸಭಾ ಮಂಗಳೂರು ಕೇಂದ್ರೀಯ ಸಮಿತಿಯ ಅಧ್ಯಕ್ಷರಾದ ಎ.ಕೆ. ಮಣಿಯಾಣಿ, ಪಾಣಾಜೆ ಗ್ರಾಮ ಪಂಚಾಯತ್ ಸದಸ್ಯರಾದ ಜಯಶ್ರೀ ದೇವಸ್ಯ ಆಗಮಿಸಲಿದ್ದಾರೆ.


























