ವಿಟ್ಲ : ಬಸವನಗುಡಿಯ ಬಳಿಯ ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸುವ ಮೂಲಕ ಶಿಕ್ಷಕರ ದಿನಾಚರಣೆಯನ್ನು ಆಚರಿಸಿದರು.

ಸಂಸ್ಥೆಯಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತಿ ಪಡೆದುಕೊಂಡ ಹಿರಿಯ ಶಿಕ್ಷಕಿ ಬೀನಾ ರೋಡ್ರಿಗಸ್ ರವರನ್ನು ಶಿಕ್ಷಕರು, ವಿದ್ಯಾರ್ಥಿಗಳು ಸೇರಿ ಈ ಸಂದರ್ಭದಲ್ಲಿ ಗೌರವಿಸಿದರು.

ಸಂಸ್ಥೆಯಲ್ಲಿ ಶಿಕ್ಷಕರ ಗೌರವಯುತ ನಡವಳಿಕೆಯನ್ನು ಪ್ರಶಂಸಿಸಿದ ಅವರು ವಿದ್ಯಾರ್ಥಿಗಳ ಮತ್ತು ಗುರುಗಳ ಸಂಬಂಧಗಳ ಬಗ್ಗೆ ವಿವರಿಸಿದರು.
ಸಂಸ್ಥೆಯ ಆಡಳಿತಮಂಡಳಿಯ ಉಪಾಧ್ಯಕ್ಷ ಶ್ರೀಧರ ಶೆಟ್ಟಿ, ಕಾರ್ಯದರ್ಶಿ ಮೋಹನ ಎ, ಆಡಳಿತಾಧಿಕಾರಿ ರಾಧಾಕೃಷ್ಣ, ಪ್ರಾಂಶುಪಾಲ ಜಯರಾಮ ರೈ, ಉಪಪ್ರಾಂಶುಪಾಲೆ ಜ್ಯೋತಿ ಶೆಣೈ ಉಪಸ್ಥಿತರಿದ್ದರು.
ಪ್ರಾಂಶುಪಾಲರು ಸ್ವಾಗತಿಸಿದ ಕಾರ್ಯಕ್ರಮವನ್ನು ಶಾಲಾ ಹಿರಿಯ ವಿದ್ಯಾರ್ಥಿಗಳು, ವಿದ್ಯಾರ್ಥಿ ನಾಯಕಿ ಸೃಜನಾ ರೈ ಯವರ ನಾಯಕತ್ವದಲ್ಲಿ ಸಂಯೋಜಿಸಿದ್ದರು. ಶಿಕ್ಷಕರು ವಿದ್ಯಾರ್ಥಿಗಳೆಲ್ಲರಿಗೂ ಸಾಮೂಹಿಕ ಗೀತೆಯೊಂದಿಗೆ ಹರಸಿದರು. ವಿದ್ಯಾರ್ಥಿಗಳ ಆಯೋಜನೆಯಲ್ಲಿ ಗುರುಸಮೂಹಕ್ಕೆ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳು ಕಾರ್ಯಕ್ರಮಕ್ಕೆ ಮೆರುಗು ಕೊಟ್ಟಿತ್ತು.


























