ಮಂಗಳೂರು : ಮೈತ್ರಿ ಮುಟ್ಟಿನ ಕಪ್ ಯೋಜನೆಯ ಬೃಹತ್ ವಿತರಣಾ ಕಾರ್ಯಕ್ರಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರಿನಲ್ಲಿ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ವಿಧಾನಸಭೆಯ ಸಭಾಪತಿ ಯು.ಟಿ.ಖಾದರ್, ಶಾಸಕ ಅಶೋಕ್ ಕುಮಾರ್ ರೈ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಡಿ. ರಂದೀಪ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕ ಡಾ. ಎಂ. ಇಂದುಮತಿ, ವಿಧಾನ ಪರಿಷತ್ ಶಾಸಕ ಕೆ. ಮಂಜುನಾಥ ಭಂಡಾರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಯೋಜನಾ ನಿರ್ದೇಶಕ ಡಾ. ಶ್ರೀನಿವಾಸ್ ಜಿ.ಎನ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ವಿಭಾಗಿಯ ಸಹ ನಿರ್ದೇಶಕಿ ಡಾ.ರಾಜೇಶ್ವರಿ ದೇವಿ ಎಚ್. ಆರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಉಪನಿರ್ದೇಶಕಿ ಡಾ. ವೀಣಾ ವಿ., ಮಂಗಳೂರು ಮೇಯರ್ ಸುಧೀರ್ ಶೆಟ್ಟಿ, ಖ್ಯಾತ ಚಲನಚಿತ್ರ ನಟಿ ಸಪ್ತಮಿ ಗೌಡ ಭಾಗವಹಿಸಿದ್ದರು.

























