ಮಂಗಳೂರು : ಸೌಜನ್ಯ ಪ್ರಕರಣಕ್ಕೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಮಂಗಳೂರು ನಗರದಲ್ಲಿ ಜಿಲ್ಲಾ ಒಕ್ಕಲಿಗರ ಹೋರಾಟ ಸಮಿತಿಯಿಂದ ಧರಣಿ ಸತ್ಯಾಗ್ರಹ ನಡೆಯಿತು.

ನಗರದ ತಾಲೂಕು ಕಚೇರಿ ಎದುರು 2 ದಿನಗಳ ಕಾಲ ನಡೆಯಲಿರುವ ಧರಣಿ ಸತ್ಯಾಗ್ರಹದಲ್ಲಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ನ್ಯಾಯ ಒದಗಿಸುವಂತೆ ಪ್ರತಿಭಟನಾಕಾರರ ಒತ್ತಾಯಿಸಿದ್ದಾರೆ.
ಪ್ರಕರಣದ ನೈಜ್ಯ ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆ ನೀಡಬೇಕು. ಪ್ರಕರಣದ ತನಿಖೆಯ ದಾರಿತಪ್ಪಿಸಿದ ಪೊಲೀಸ್ ತನಿಖಾಧಿಕಾರಿ ಮತ್ತು ವೈದ್ಯಕೀಯ ವರದಿ ನೀಡಿದ ವೈದ್ಯರನ್ನು ತನಿಖೆಗೆ ಒಳ ಪಡಿಸಬೇಕು. ಅವರ ವಿರುದ್ಧ ಕಾನೂನಾತ್ಮಕ ಕಠಿಣ ಕ್ರಮ ಕೈಗೊಳ್ಳಬೇಕು. ರಾಜ್ಯ ಸರಕಾರ ಪ್ರಕರಣಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಈ ಧರಣಿ ಸತ್ಯಾಗ್ರಹದಲ್ಲಿ ಪ್ರತಿಭಟನಾಕಾರರ ಒತ್ತಾಯಿಸಿದ್ದಾರೆ.


























