ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಆಯೋಜನೆಯಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಅಕ್ಷಯ ಗುರು ಪುರಸ್ಕಾರ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಡಿ ಮಹೇಶ್ ರೈ,ನಿವೃತ್ತ ಕನ್ನಡ ಪ್ರಾಧ್ಯಾಪಕರು ವಿವೇಕಾನಂದ ಕಾಲೇಜು ಪುತ್ತೂರು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿ, ಯಾವಾಗ ತಾನೇ ಕಲಿಸಿದ ವಿದ್ಯಾರ್ಥಿ ಶಿಕ್ಷಕನನ್ನು ಮೀರಿ ಬೆಳೆದು ಉನ್ನತಸ್ಥಾನಕ್ಕೇರುತ್ತಾನೋ, ಅಂದು ಶಿಕ್ಷಕನ ಜೀವನ ಸಾರ್ಥಕ ಎಂದರು.
ಅಕ್ಷಯ ಗುರು ಪುರಸ್ಕಾರವನ್ನು ದಯಾನಂದ ರೈ ಕರ‍್ಮಂಡ, ರಾಜ್ಯ ಪ್ರಶಸ್ತಿ ವಿಜೇತರು,ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರು, ಕೋಟಿಯಪ್ಪ ಪೂಜಾರಿ ಸೇರ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರು, ನಾರಾಯಣ ಕೆ ನಿವೃತ್ತ ಮುಖ್ಯ ಶಿಕ್ಷಕರು, ಸರಕಾರಿ ಪ್ರೌಢಶಾಲೆ ಉಪ್ಪಳಿಗೆ, ರವೀಶ್ ಪಡುಮಲೆ ಸಹಪ್ರಾಧ್ಯಾಪಕರು, ಎಸ್ ಡಿ ಎಂ ಎಂಜಿನಿಯರಿಂಗ್ ಕಾಲೇಜು ಉಜಿರೆ, ಶುಭಲತಾ ಹಾರಾಡಿ,ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ವಿಜೇತರು,ಮುಖ್ಯಗುರುಗಳು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆನಡ್ಕ, ಸಂಧ್ಯಾ ರವೀಶ್ಚಂದ್ರ, ನಿವೃತ್ತ ಅಂಗನವಾಡಿ ಕರ‍್ಯರ‍್ತೆ ಸಂಪ್ಯ, ಉದಯಕುಮಾರ್ ರೈ ಎಸ್, ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ವಿಜೇತರು, ಸಹ ಶಿಕ್ಷಕರು ವಿದ್ಯಾ ಬೋಧಿನಿ ಪ್ರೌಢಶಾಲೆ ಬಾಳಿಲ ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ಸನ್ಮಾನ ಮಾಡಿ ಗೌರವಿಸಲಾಯಿತು.

ಸನ್ಮಾನ ಸ್ವೀಕರಿಸಿದ ಡಾಕ್ಟರ್ ರವೀಶ್ ಪಡುಮಲೆಯವರು ತಮ್ಮ ಸನ್ಮಾನವನ್ನು ಗುರುಗಳಾದ ರಘುನಾಥ ರೈ ಅವರಿಗೆ ಅರ್ಪಿಸಿದರು.
ಶುಭಲತಾ ಹಾರಾಡಿಯವರು ಶಾಶ್ವತವಾದ ಆನಂದ ನಮ್ಮೊಳಗೆ ಇದೆ ಅದನ್ನು ನಾವು ಕಂಡುಕೊಳ್ಳಬೇಕು ಎಂದು ಹೇಳಿದರು.
ಕೋಟಿಯಪ್ಪ ಪೂಜಾರಿ ಸೇರ ಅವರು ತಮ್ಮ ಒಕ್ಕಣೆಯ ಮೂಲಕ ಕಾಲೇಜಿಗೆ ಅಭಿನಂದನೆಯನ್ನು ಸಲ್ಲಿಸಿದರು.

ಅತಿಥಿಗಳಾಗಿ ಆಗಮಿಸಿದ ಭಾಗ್ಯೇಶ್ ರೈ, ನಿರ್ದೆಶಕರು, ವಿದ್ಯಾಮಾತಾ ಅಕಾಡೆಮಿ ಮಾತನಾಡಿ ನಿಮ್ಮ ಬದುಕನ್ನ ಪ್ರೀತಿಸಿ, ಇನ್ನೊಬ್ಬರ ಬದುಕನ್ನ ಗೌರವಿಸಿ ಎಂದು ವಿದ್ಯಾರ್ಥಿಗಳಿಗೆ ಜೀವನದ ಮೌಲ್ಯಗಳನ್ನು ತಿಳಿಸಿದರು.
ಅಧ್ಯಕ್ಷ ನೆಲೆಯಲ್ಲಿ ಮಾತನಾಡಿದ, ಜಯಂತ ನಡುಬೈಲು ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಶಿಕ್ಷಕರಿಗೆ ಗೌರವಿಸುವುದು ನಮ್ಮ ಭಾಗ್ಯ ಎಂದರು.
ವೇದಿಕೆಯಲ್ಲಿ ಕಾಲೇಜು ವಿದ್ಯಾರ್ಥಿ ಸಂಘದ ನಾಯಕ ವಿನೋದ್ ಕೆ ಸಿ ಹಾಗೂ ಕಾರ್ಯದರ್ಶಿ ಶೈಲಾಶ್ರೀ ಉಪಸ್ಥಿತರಿದ್ದರು. ಅಕ್ಷಯ ಗುರುಪುರಸ್ಕಾರದ ಸನ್ಮಾನ ಪತ್ರವನ್ನು ಕುಮಾರಿ ಭವ್ಯಶ್ರೀ ಬಿ, ಓದಿದರು. ರಶ್ಮಿ ಕೆ,ಮತ್ತು ಕಿಶನ್ ರಾವ್, ಪ್ರಕೃತಿ ಮತ್ತು ಬಳಗದಿಂದ ಪ್ರಾರ್ಥನೆ ನಡೆಯಿತು.
ಕಾಲೇಜಿನ ಆಡಳಿತ ನಿರ್ದೇಶಕಿ ಕಲಾವತಿ ಜಯಂತ್ ಸ್ವಾಗತಿಸಿ, ಆಡಳಿತಾಧಿಕಾರಿ ಅರ್ಪಿತ್ ಟಿಎ ವಂದಿಸಿದರು. ಪ್ರಾಂಶುಪಾ ಸಂಪತ್ ಪಕ್ಕಳ ಪ್ರಾಸ್ತಾವಿಕ ಮಾತನಾಡಿದರು. ಉಪನ್ಯಾಸಕಿ ಆಶಿಕಾ ಕಾರ್ಯಕ್ರಮ ನಿರೂಪಿಸಿದರು.


























