ಪುತ್ತೂರು : ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಹಮ್ಮಿಕೊಂಡ ಏಕಾದಶ ಕೋಟಿ ಮಹಾಲಿಂಗೇಶ್ವರ ದೇವರ ಜಪಯಜ್ಞ ನಡೆಯಿತು.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕೇಶವ ಪ್ರಸಾದ್ ಮುಳಿಯ ರವರು ಜಪದ ವಿಧಿಯನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಜಯರಾಮ ಕೆದಿಲಾಯ ಶಿಬರ, ಸಂಚಾಲಕರಾದ ಭಾಸ್ಕರ್ ಆಚಾರ್ ಹಿಂದಾರ್,
ಕಾರ್ಯದರ್ಶಿಗಳಾದ ಕೃಷ್ಣಪ್ರಸಾದ್ ಕೆದಿಲಾಯ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಐತ್ತಪ್ಪ ನಾಯ್ಕ್ ಮತ್ತು ರವೀಂದ್ರನಾಥ್ ರೈ ಬಳ್ಳಮಜಲು ಹಾಗೂ ಶಾಲಾ ಮುಖ್ಯೋಪಾಧ್ಯಾಯನಿ ಜಯಮಾಲಾ ವಿ ಎನ್, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.



























