ಬೆಳ್ತಂಗಡಿ : ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡಿರುವ ಯುವಕನೋರ್ವನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಕಕ್ಕಿಂಜೆ ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಕಕ್ಕಿಂಜೆ ಚಿಬಿದ್ರೆ ನಿವಾಸಿ ಮಹಮ್ಮದ್ ನಿಫಾಲ್ (25) ಬಂಧಿತ ಯುವಕ.
ಬೆಳ್ತಂಗಡಿ ತಾಲೂಕು ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಪೇಟೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಕಕ್ಕಿಂಜೆ ಚಿಬಿದ್ರೆ ನಿವಾಸಿಯಾದ ಮಹಮ್ಮದ್ ನಿಫಾಲ್ (25) ಎಂಬಾತನು ಮಾದಕ ವಸ್ತು ಗಾಂಜಾವನ್ನು ಸೇವನೆ ಮಾಡಿರುವುದನ್ನು ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು, ಆತನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಆತನು ನಿಷೇದಿತ ಮಾದಕ ವಸ್ತು ಗಾಂಜಾವನ್ನು ಸೇವನೆ ಮಾಡಿರುವುದಾಗಿ ದೃಢಪಟ್ಟಿರುತ್ತದೆ.
ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 67/2023 ಕಲಂ: 27(ಬಿ) ಎನ್ ಡಿಪಿಎಸ್ ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

























