ಸುಳ್ಯ : ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೊಡಗು ಸೋಮವಾರಪೇಟೆ ಬಸವನಹಳ್ಳಿ ನಿವಾಸಿ ಸುಬ್ರಮಣಿ (26) ಬಂಧಿತ ಆರೋಪಿ.

ಸುಳ್ಯ ಪೊಲೀಸ್ ಠಾಣಾ ವ್ಯಾಪ್ರಿಯಲ್ಲಿ ಸೆ.16 ರಂದು ದಾಖಲಾಗಿದ್ದ ಮೋಟರ್ ಸೈಕಲ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಸುಬ್ರಮಣಿ ಎಂಬಾತನನ್ನು ಸುಳ್ಯ ಠಾಣಾ ಪೊಲೀಸ್ ಉಪನಿರೀಕ್ಷಕರು ಮತ್ತು ಸಿಬ್ಬಂದಿಗಳ ತಂಡ ಕ್ಷೀಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ವರದಿಯಾದ ಕೆಲವೇ ಗಂಟೆಗಳಲ್ಲಿ ಸುಳ್ಯ ತಾಲೂಕು ಆಲಟ್ಟಿ ಗ್ರಾಮದ ಸರಳಿಪಂಜ ಎಂಬಲ್ಲಿ ಪತ್ತೆ ಮಾಡಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರು ಪಡಿಸಿರುತ್ತಾರೆ.
ಆರೋಪಿತನು ಈ ಹಿಂದೆ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಹಾಗೂ ಹುಣಸೂರು ನಗರ ಪೊಲೀಸ್ ಠಾಣೆಯಲ್ಲಿ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ. ಇದಲ್ಲದೆ ಆರೋಪಿತನು ಕೆಲ ದಿನಗಳ ಹಿಂದೆ ಸುಳ್ಯ ಬಸ್ ನಿಲ್ದಾಣದಲ್ಲಿ ಬಿದ್ದಿದ್ದ ವ್ಯಕ್ತಿಯೊಬ್ಬರ ಪರ್ಸ್ ತೆಗೆದುಕೊಂಡು ಹೋಗಿದ್ದು ತನಿಖೆ ವೇಳೆ ತಿಳಿದು ಬಂದಿರುತ್ತದೆ.

























