ಬೆಳ್ತಂಗಡಿ : ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ ಬೆಳ್ತಂಗಡಿ ತಾಲೂಕಿನ ಕುತ್ಲೂರು ಎಂಬಲ್ಲಿ ನಡೆದಿದೆ
ಕೇರಳ ತೋಡಪುಡ ತಾಲೂಕು, ಇಡ್ಕಿ ನಿವಾಸಿ ತೋಮಸ್ (34), ಬೆಳ್ತಂಗಡಿ ಕುತ್ಲೂರು ನಿವಾಸಿ ರಂಜಿತ್ (31) ಬಂಧಿತರು.
ಸೆ.18 ರಂದು ಬೆಳಿಗ್ಗೆ ಬೆಳ್ತಂಗಡಿ ತಾಲೂಕು ಕುತ್ಲೂರು ಗ್ರಾಮದ ಕುತ್ಲೂರು ಎಂಬಲ್ಲಿ ಜೀಪಿನಲ್ಲಿ ಆರೋಪಿಗಳು ಜಾನುವಾರು ಸಾಗಾಟ ಮಾಡುತ್ತಿದ್ದದನ್ನು ಪತ್ತೆಹಚ್ಚಿದ ವೇಣೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು (ಕಾ&ಸು) ಮತ್ತು ಸಿಬ್ಬಂದಿಗಳು ಆರೋಪಿಗಳ ವಶದಲ್ಲಿದ್ದ 1 ಗಂಡು ಕರು ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಜೀಪನ್ನು ಸ್ವಾಧೀನಪಡಿಸಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಬಗ್ಗೆ ವೇಣೂರು ಠಾಣೆಯಲ್ಲಿ ಅ.ಕ್ರ ನಂಬ್ರ 58-2023 ಕಲಂ: 5,7,12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧ್ಯಾದೇಶ 2020 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

























