ವಿಟ್ಲ : ಆಟೋ ರಿಕ್ಷಾ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ವಿಟ್ಲ ಸಮೀಪದ ಮಂಗಿಲಪದವು ಎಂಬಲ್ಲಿ ನಡೆದಿದೆ.

ಘಟನೆಯಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.
ಇನ್ನೋರ್ವ ಸವಾರನಿಗೆ ಗಾಯವಾಗಿದ್ದು, ವಿಟ್ಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

























