ವಿಟ್ಲ : ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಪಿಕಪ್ ವಾಹನದ ನಡುವೆ ಅಪಘಾತ ಸಂಭವಿಸಿದ ಘಟನೆ ಅಡ್ಕಸ್ಥಳದಲ್ಲಿ ನಡೆದಿದೆ.
ಘಟನೆಯಲ್ಲಿ ಪಿಕಪ್ ವಾಹನದ ಚಾಲಕ ಮುಸ್ತಫಾ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಅಡಿಕೆ ಗಿಡ ಸಾಗಾಟದ ಪಿಕಪ್ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಗಂಭೀರ ಗಾಯಗೊಂಡ ಪಿಕಪ್ ಚಾಲಕನನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ವರದಿಯಾಗಿದೆ.


























