ಉಡುಪಿ ಜಿಲ್ಲಾ ವಕೀಲರ ಸಂಘದ ಚುನಾವಣೆಯಲ್ಲಿ ಅತ್ಯಧಿಕ ಮತಗಳನ್ನು ಪಡೆದು ರಾಜೇಶ್ ಎ.ಆರ್. ಅವರು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

ಮೂಲತಃ ಪುತ್ತೂರು ತಾಲೂಕು ಪಾಣಾಜೆ ಗ್ರಾಮದ ಆರ್ಲಪದವು ನಿವಾಸಿಯಾಗಿರುವ ಇವರು ಪ್ರಸ್ತುತ ಉಡುಪಿಯಲ್ಲಿ ವಾಸ್ತವ್ಯ ಹೊಂದಿದ್ದಾರೆ.
ರಾಜೇಶ್ ರವರು ಕಳೆದ 17 ವರುಷದಿಂದ ಉಡುಪಿ ನ್ಯಾಯಾಲಯದಲ್ಲಿ ವಕೀಲ ವೃತ್ತಿ ನಿರ್ವಹಿಸುತ್ತಿದ್ದು, ಹೆಚ್ಚಾಗಿ ಎಂಇಸಿ (ಮೋಟಾರು ವೆಹಿಕಲ್ ಪರಿಹಾರ) ವಕೀಲರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

2023-24ನೇ ಸಾಲಿನ ಉಡುಪಿ ಜಿಲ್ಲಾ ವಕೀಲರ ಸಂಘದ ಮಹಾ ಚುನಾವಣೆಯಲ್ಲಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಿ, ಚುನಾವಣೆಯಲ್ಲಿ ತೀವ್ರ ಪೈಪೋಟಿ ಇದ್ದರೂ ಅತ್ಯಧಿಕ ಮತಗಳನ್ನು ಪಡೆದು ಜಯಗಳಿಸಿರುತ್ತಾರೆ.

























