ಬೆಂಗಳೂರು: ದೇವರು, ಧರ್ಮದ ವಿಚಾರದಲ್ಲಿ ಇಂತಹ ಕೃತ್ಯ ಸಹಿಸಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಶಿವಮೊಗ್ಗ ಗಲಾಟೆ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಮೆರವಣಿಗೆ ವೇಳೆ ದುಷ್ಕರ್ಮಿಗಳು ಕಲ್ಲು ಹೊಡೆದಿದ್ದಾರೆ. ಶಿವಮೊಗ್ಗದ ರಾಗಿಗುಡ್ಡ ಎಂಬಲ್ಲಿ ಕಲ್ಲು ಎಸೆದಿದ್ದಾರೆ. ಹೀಗಾಗಿ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಒಟ್ಟು 40 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ಈಗ ಸಂಪೂರ್ಣ ನಿಯಂತ್ರಣದಲ್ಲಿದೆ. ಕಲ್ಲು ತೂರಾಟ ಸಹಿಸಲ್ಲ ಅಂತ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಇನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಹಿತಿ ನೀಡಿ.., ಶಿವಮೊಗ್ಗ ಗಲಾಟೆ ಸಂಬಂಧ 8 ಮಂದಿ ಅರೆಸ್ಟ್ ಮಾಡಲಾಗಿದೆ. ಎರಡೂ ಗುಂಪಿನ ತಲಾ 4 ಜನರನ್ನ ಬಂಧಿಸಿದ್ದಾರೆ. ಇವುಗಳನ್ನೆಲ್ಲಾ ಏನ್ ಹೊಸದಾಗಿ ಮಾಡ್ತಾರಾ? ಬ್ಯಾನರ್ ಕಟ್ತಾರೆ, ಅಲ್ದೇ ಪೋಸ್ಟರ್ ಹಾಕ್ತಾರೆ. ಕೆಲವರು ಅಡ್ವಾಟೇಂಜ್ ಆಗಿ ತೆಗೆದುಕೊಳ್ತಾರೆ. ಕತ್ತಿ, ಗುರಾಣಿ ಬಳಕೆ ಮಾಡಿದ್ರು ಎಂಬ ಬಗ್ಗೆ ಮಾಹಿತಿ ಇಲ್ಲ. ಯಾರನ್ನೂ ಹೊರಗಿನಿಂದ ಬರೋದಕ್ಕೆ ಬಿಟ್ಟಿಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ.
ಘಟನಾ ಸ್ಥಳಕ್ಕೆ ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ ಭೇಟಿ ನೀಡಿ ಮಾಧ್ಯಮಗಳ ಜೊತೆ ಮಾತನಾಡಿದರು. ನಡೀತಿರೋ ಘಟನೆ ನೋಡಿದರೆ.. ಪ್ರೀ ಪ್ಲಾನ್ಡ್ ಎನಿಸುತ್ತೆ. ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿಗಳು ಕಠಿಣ ಕ್ರಮ ವಹಿಸಿ ಎಂದು ಆಗ್ರಹಿಸಿದ್ದಾರೆ.
ಸದ್ಯ ಶಿವಮೊಗ್ಗ ಶಾಂತವಾಗಿದೆ, ಆದರೂ ಪೊಲೀಸರು ಹೈ-ಅಲರ್ಟ್ ಆಗಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಿದ್ದಾರೆ. 144 ಸೆಕ್ಷನ್ ಮುಂದುವರಿಕೆ, ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

























