ವಿಟ್ಲ : ಹಿಂದೂಪರ ಸಂಘಟನೆಯಲ್ಲಿ ಗುರುತಿಸಿಕೊಂಡು ಸಾಮಾಜಿಕ ಹೋರಾಟದ ಮುಖಾಂತರ ಗುರುತಿಸಿಕೊಂಡಿರುವ ಸಂಘಟನೆಯ ಕಾರ್ಯಕರ್ತರನ್ನ ಗುರಿಯಾಗಿಸಿಕೊಂಡು ಅವರ ಮಾನಸಿಕ ಧೈರ್ಯವನ್ನು ಕುಗ್ಗಿಸುವ ದೊಡ್ಡ ಹುನ್ನಾರ ನಡೆಯುತ್ತಿದೆ ಎಂದು ಹಿಂದೂ ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲೆ ಆರೋಪಿಸಿದೆ.
ಹಿಂದೂ ಪರ ಕಾರ್ಯದಲ್ಲಿ ಮುಂಚೂಣಿಯಲ್ಲಿರುವ ಕಾರ್ಯಕರ್ತರಿಗೆ ಇಲ್ಲಸಲ್ಲದ ಆರೋಪವನ್ನು ಮಾಡಿ ಗಡಿಪಾರಿಗೆ ಪ್ರಸ್ತಾವನೆ ನೀಡುವ ವಿಚಾರವನ್ನು ಹಿಂದೂ ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲೆ ಖಂಡಿಸಿದೆ.
ಹಿಂದೂ ಜಾಗರಣ ವೇದಿಕೆಯ ವಿಟ್ಲ ತಾಲೂಕಿನ ತಾಲೂಕಿನ ಜವಾಬ್ದಾರಿ ಇರುವ ಓರ್ವ ಕಾರ್ಯಕರ್ತನಿಗೆ ನಿಮ್ಮನ್ನ ಗಡಿಪಾರು ಯಾಕೆ ಮಾಡಬಾರದು ಎಂದು ನೋಟಿಸ್ ಜಾರಿ ಮಾಡಿರುವ ಈ ಆದೇಶವನ್ನು ತಕ್ಷಣ ಹಿಂಪಡೆಯಬೇಕು ಎಂದು ಹಿಂದೂ ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲೆ ಆಗ್ರಹಿಸಿದ್ದು, ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟದ ಮೂಲಕ ಉತ್ತರ ನೀಡುವುದಾಗಿ ತಿಳಿಸಿದೆ.


























