ಶಿವಮೊಗ್ಗ : ರಾಗಿಗುಡ್ಡದಲ್ಲಿ ಈದ್ ಮಿಲಾದ್ ನಂತರ ನಡೆದ ಗಲಭೆಯಲ್ಲಿ ಹಾನಿಗೊಳಗಾದ ಎಲ್ಲಾ ಮನೆಗಳಿಗೆ ಅರುಣ್ ಪುತ್ತಿಲ ನೇತೃತ್ವದ ತಂಡ ಭೇಟಿ ನೀಡಿತು.

ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪೊಲೀಸರಿಗೆ ಕಲ್ಲುತೂರಾಟ, ಗಲಭೆಗಳನ್ನು ನಡೆಸಿ, ನೂರಾರು ಮನೆಗಳಿಗೆ ಹಾನಿ ಉಂಟು ಮಾಡಲಾಗಿದ್ದು, ಈ ಎಲ್ಲಾ ಸಂತ್ರಸ್ತರ ಮನೆಗಳಿಗೆ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ತಿಳಿಸಿದರು.

ಶಿವಮೊಗ್ಗ ರಾಗಿಗುಡ್ಡದಲ್ಲಿ ಲಕ್ಷ್ಮೀ ಎಂಬವರು ತಾಳಿ ಅಡವಿಟ್ಟು ಆಟೋ ಖರೀದಿಸಿದ್ದು, ಗಲಭೆಯಲ್ಲಿ ಆಟೋ ಜಖಂಗೊಂಡಿದೆ. ಹಲವು ಮನೆಗಳ ಕಿಟಕಿ, ಬಾಗಿಲು , ಗೋಡೆ ಜಖಂಗೊಂಡಿದೆ. ವಿದ್ಯಾಭ್ಯಾಸ ಕಲಿಸಿದ ಶಿಕ್ಷಕಿ ಮನೆಗೆ ಅವರ ಶಿಷ್ಯಂದಿರೇ ಕಲ್ಲು ತೂರಾಟ ನಡೆಸಿದ್ದು, ನೆನೆಸಿಕೊಂಡು ನಿವೃತ್ತ ಶಿಕ್ಷಕಿ ಬೇಸರ ವ್ಯಕ್ತಪಡಿಸಿದರು.

ಈ ಘಟನೆಯಲ್ಲಿ ಭಯೋತ್ಪಾದಕ ಬೆಂಬಲಿಗರ ಕೈವಾಡವಿರುವುದು ಮೇಲ್ನೋಟಕ್ಕೆ ಕಾಣುತ್ತಿದ್ದು, ಸರ್ಕಾರ ಈ ಕ್ರೌರ್ಯ ಘಟನೆಯನ್ನು ಶೀಘ್ರ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಮತ್ತು ಸಂತ್ರಸ್ಥರಿಗೆ ಸೂಕ್ತ ಭದ್ರತೆ ಹಾಗೂ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

























