ಧರ್ಮಸ್ಥಳ : ರೈಸ್ ಮಿಲ್ ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಧರ್ಮಸ್ಥಳ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೃಷ್ಣಪ್ಪ ಸಪಲ್ಯ (60) ಮೃತರು.
ಈ ಬಗ್ಗೆ ಮೃತರ ಪುತ್ರ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಕೃಷ್ಣಪ್ಪ ಸಪಲ್ಯ ರವರು ರೈಸ್ ಆಯಿಲ್ ಫ್ಲೋರ್ ಮಿಲ್ಸ್ ನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದು, ಪ್ರತಿನಿತ್ಯ ಮದ್ಯ ಸೇವನೆ ಮಾಡುವ ಚಟ ಹೊಂದಿದ್ದು, ಅ.30 ರಂದು ಬೆಳಿಗ್ಗೆ ಸದರಿ ರೈಸ್ ಮಿಲ್ಲಿಗೆ ಹೋದವರು ಮಧ್ಯಾಹ್ನ ಮನೆಗೆ ಬಾರದಿದ್ದು, ಸಂಜೆ ಜಮಾ ಉಗ್ರಾಣದ ಮ್ಯಾನೇಜರ್ ಮನೆಗೆ ಬಂದು ಕೃಷ್ಣಪ್ಪ ರವರು ರೈಸ್ ಮಿಲ್ ನ ಹಿಂಬದಿಯಲ್ಲಿ ನೀರು ತುಂಬಿಸಿಟ್ಟಿರುವ ದೊಡ್ಡ ಗಾತ್ರದ ಸ್ಟೀಲ್ ಪಾತ್ರೆಯ ಒಳಗೆ ನೀರಿನಲ್ಲಿ ಕವುಚಿ ತೇಲಿಕೊಂಡು ಮೃತಪಟ್ಟಿರುವ ರೀತಿಯಲ್ಲಿ ಇದ್ದಾರೆ ಎಂದು ತಿಳಿಸಿದ್ದು, ಸ್ಥಳಕ್ಕೆ ತೆರಳಿ ನೋಡಿದಾಗ ಸ್ಟೀಲ್ ಪಾತ್ರೆಯ ಮೇಲ್ಭಾಗವನ್ನು ಅರ್ಧದಷ್ಟು ಸಿಮೆಂಟ್ ಶೀಟ್ ನ್ನು ಮುಚ್ಚಿದ್ದು, ಕೃಷ್ಣಪ್ಪ ರವರು ಸ್ಟೀಲ್ನ ದೊಡ್ಡ ಗಾತ್ರದ ಪಾತ್ರೆಯಲ್ಲಿ ತುಂಬಿಸಿಟ್ಟಿದ್ದ ನೀರಿಗೆ ಇಳಿದು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಂತೆ ಕಂಡುಬಂದಿದ್ದು, ತಂದೆಯವರ ಮರಣದ ಸರಿಯಾದ ಕಾರಣ ತಿಳಿದಿಲ್ಲ ಎಂದು ಅವರ ಪುತ್ರ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯು ಡಿ ಆರ್ ಸಂಖ್ಯೆ 65/2023 ಕಲಂ: 174 (iii)& (iv) ಸಿ ಆರ್ ಪಿ ಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.


























