ಮಂಗಳೂರು : ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಚ್ಚೂರು ಬಳಿ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಟಿಪ್ಪರ್ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ.
ಗುರುಪುರ ಹೊಸಮನೆ ನಿವಾಸಿ ಸಚಿನ್ ಕುಮಾರ್ ಆಚಾರ್ಯ (33) ಮೃತರು.
ಸಚಿನ್ ಎಚ್‌ಡಿಎಫ್‌ಸಿ ಬ್ಯಾಂಕ್‌ನಲ್ಲಿ ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಬೈಕ್ ಗೆ ಟಿಪ್ಪರ್ ಡಿಕ್ಕಿ ಹೊಡೆದಿದೆ.
ಸಚಿನ್ ಪೋಷಕರು, ಓರ್ವ ಸಹೋದರ ಮತ್ತು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.
ಘಟನೆ ಸಂಬಂಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


























