ಬೆಳ್ತಂಗಡಿ : ಕಳೆಂಜ ಗ್ರಾಮದಲ್ಲಿ ಸ್ವಾತಂತ್ರ್ಯ ಪೂರ್ವದಿಂದಲೂ ವಾಸವಾಗಿರುವ ಸುಮಾರು ನೂರಕ್ಕೂ ಹೆಚ್ಚು ಮನೆಗಳಿರುವ ಪ್ರದೇಶದಲ್ಲಿ ತಮ್ಮ ಪೂರ್ವಜರ ಕಾಲದಿಂದಲೂ ಕೃಷಿ ಮಾಡಿಕೊಂಡು ಬಂದಿರುವ ಜಾಗದಲ್ಲಿ ಮನೆಕಟ್ಟಲು ಹಾಕಿದ್ದ ಅಡಿಪಾಯವನ್ನು ಏಕಾಏಕಿ ಕಳೆಂಜದ ದೇವಣ್ಣ ಗೌಡರ ಮನೆ ದ್ವಂಸಗೊಳಿಸಲು ಸಜ್ಜಾದ ಅರಣ್ಯ ಇಲಾಖೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜಾ ರವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.


ಅರುಣ್ ಕುಮಾರ್ ಪುತ್ತಿಲ ಹಾಗೂ ಪುತ್ತಿಲ ಪರಿವಾರದ ಪ್ರಮುಖರು ಪ್ರತಿಭಟನಾ ಸ್ಥಳಕ್ಕೆ ತೆರಳಿ ಪ್ರತಿಭಟನಾ ನಿರತರಿಗೆ ಸಾಥ್ ನೀಡಿದರು.


ಕೊನೆಗೆ ಅರಣ್ಯ ಅಧಿಕಾರಿಗಳು ಸರ್ವೆ ನಡೆಸುವ ಬಗ್ಗೆ ಒಪ್ಪಿಗೆ ಕೊಟ್ಟ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.



























